ಭರತಾಂಜಲಿಯಿಂದ ಗಣೇಶಪುರದಲ್ಲಿ ಗಾನಾಮೃತ ಮತ್ತು ನೃತ್ಯ ವೈಭವ

Upayuktha
0


ಸುರತ್ಕಲ್‌: ಭರತನಾಟ್ಯವು ಕೇವಲ ಒಂದು ನೃತ್ಯ ಪ್ರಕಾರವಲ್ಲ, ಅದೊಂದು ಜೀವನ ವಿಧಾನ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ. ಜೀವನ ಮೌಲ್ಯಗಳನ್ನು ಕಲಿಸುವ, ಶಿಸ್ತು ಮೂಡಿಸುವ ಮತ್ತು ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಅದ್ಭುತ ಕಲೆಯಾಗಿದೆ ಎಂದು ಕಟ್ಟಿಕೊಳ್ಳ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಧರ್ಮೇಂದ್ರ ನುಡಿದರು.


ಅವರು ಭರತಾಂಜಲಿ ನೃತ್ಯಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಗಣೇಶಪುರ ದೇವಳದ ವಠಾರದಲ್ಲಿ ಹಮ್ಮಿಕೊಂಡಿರುವ ಗಾನಾಮೃತ ಹಾಗೂ ಭರತನಾಟ್ಯ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. ಭರತಾಂಜಲಿ ಸಂಸ್ಥೆಯ ರೂವಾರಿಗಳಾದ ಶ್ರೀಧರ ಹೊಳ್ಳ ಪ್ರತಿಮಾ ದಂಪತಿಗಳು ಮಹಾಗಣಪತಿ ದೇವಸ್ಥಾನದ ಪ್ರಾರಂಭದಿಂದಲೂ ಕಲಾ ಸೇವೆಯನ್ನು ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.


ಭರತಾಂಜಲಿಯ ನಿರ್ದೇಶಕ ಗುರು ಶ್ರೀಧರ ಹೊಳ್ಳ ಪ್ರಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯು ಬೆಳೆದು ಬಂದ ಬಗ್ಗೆ ಮಾತನಾಡಿದರು. ಸಾಂಸ್ಕೃತಿಕ ಸಮಿತಿಯ ಚಂದ್ರಹಾಸ ಶೆಟ್ಟಿಗಾರ್ ಸ್ವಾಗತಿಸಿ ನಿರೂಪಿಸಿದರು. ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು. ದೀನನಾಥ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿಗಾರ್  ಮೊದಲಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ವಂದನಾ ರಾಣಿ ಇವರಿಂದ ಗಾನಮೃತ ಹಾಗೂ ಸಿದ್ದಿ ವಿನಾಯಕ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಕಾರ್ಯಕ್ರಮ ಸಂಪನ್ನಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top