ಸಾಗರ: ತಾಲೂಕಿನ ಖಂಡಿಕಾ ಗ್ರಾಮದಲ್ಲಿ ಬ್ರಾಂಚ್ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಅಡಿಗಲ್ಲು ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು, ಕುಟುಂಬ ಸದಸ್ಯರು, ಸ್ನೇಹಿತರು, ಮಂಡಲ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಹಾಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅಂಚೆ ಇಲಾಖೆಯ ಸಿಬ್ಬಂದಿಯಾಗಿರುವ ಹಾಗೂ ಸಂಘಟನೆಯ ಕಾರ್ಯಾಧ್ಯಕ್ಷರಾದ ಶ್ರೀ ಮಂಜಪ್ಪ ಅವರು ತಮ್ಮ ವೈಯಕ್ತಿಕ ಹಣದಿಂದಲೇ ಈ ಅಂಚೆ ಕಚೇರಿ ಕಟ್ಟಡವನ್ನು ನಿರ್ಮಿಸುತ್ತಿರುವುದು ವಿಶೇಷವಾಗಿದೆ. ಕೇಂದ್ರ ಸರ್ಕಾರಕ್ಕೆ ಸೇರಿದ ಮಹತ್ವದ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ವೈಯಕ್ತಿಕವಾಗಿ ಮುಂದಾಗಿರುವುದು ಅಪರೂಪದ ಸೇವಾಭಾವನೆಯ ಉದಾಹರಣೆಯಾಗಿ ಪರಿಗಣಿಸಲಾಗಿದೆ.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೈಗೊಳ್ಳಲಾಗುತ್ತಿರುವ ಈ ಯೋಜನೆ ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

