ಧರ್ಮಸ್ಥಳದಲ್ಲಿ ರಂಗಶಿವ ಕಲಾಬಳಗದ ಆಶ್ರಯದಲ್ಲಿ ಮಕ್ಕಳಿಗಾಗಿ ರಂಗಶಿಬಿರ

Upayuktha
0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ... ಅನಿಲ್ ಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಉಜಿರೆ: ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಶಿಸ್ತು, ವಿನಯ, ಸೇವಾಮನೋಭಾವ, ಗುರು-ಹಿರಿಯರನ್ನು ಗೌರವಿಸುವುದು ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ... ಅನಿಲ್ ಕುಮಾರ್ ಹೇಳಿದರು.


ಅವರು ಗುರುವಾರ ಧರ್ಮಸ್ಥಳದಲ್ಲಿ ರಂಗಶಿವ ಕಲಾಬಳಗದ ಆಶ್ರಯದಲ್ಲಿ ನಡೆಯುತ್ತಿರುವ ರಂಗಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಹಿತವಚನ ನೀಡಿದರು. ಉತ್ತಮ ಸಂಸ್ಕಾರವಂತರಾಗಿ, ಹೊಸ ವಿಷಯಗಳನ್ನು ಕಲಿತುಕೊಂಡು, ತಪ್ಪು ಮಾಡಿದಾಗ ತಿದ್ದಿಕೊಂಡು ಮುಂದೆ ಸುಧಾರಣೆ ಮಾಡಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಬೇಕು ಎಂದು ಹೇಳಿ ಶುಭ ಹಾರೈಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ್, ಅವಿನಾಶ್ ಭಿಡೆ ಮತ್ತು ಸುಲೈಮಾನ್ ವಿಪತ್ತು ನಿರ್ವಹಣೆ ಬಗ್ಯೆ ಮಾಹಿತಿ ನೀಡಿದರು.
ರಂಗಶಿವ ಕಲಾಬಳಗದ ಸುನಿಲ್, ಸಂದೇಶ್, ಜಗದೀಶ್, ರಂಜಿತ್, ಅಭಿಷೇಕ್ ರಾವ್ ಮತ್ತು ಪದ್ಮರೇಖ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top