ಚಿತ್ತರಗಿ ಸರ್ಕಾರಿ ಪ್ರೌಢ ಶಾಲೆಗೆ 100% ರಷ್ಟು ಫಲಿತಾಂಶ

Upayuktha
0


ಹುನಗುಂದ: ತಾಲೂಕಿನ ಚಿತ್ತರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಸಾಧನೆ ಮಾಡಿದೆ.


ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕ ಸಂ ಅಂಬಿಗೇರ 604 (96.64) ಪ್ರಥಮ, ವಿಜಯಲಕ್ಷ್ಮಿ ಎಂ ಮದ್ದಾನಿಮಠ 582 (93.12) ದ್ವಿತೀಯ, ಹಣಮವ್ವ ಯ. ಕ್ಯಾದಿಗ್ಗೇರಿ 575 (92) ತೃತೀಯ ಸ್ಥಾನ ಪಡೆದಿದ್ದಾರೆ


ಒಟ್ಟು 49 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಅವರಲ್ಲಿ ಏಳು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ದರ್ಜೆ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ನಾಲ್ವರು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ರಾಮಚಂದ್ರ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು, ಹಾಗೂ  ಶಿಕ್ಷಕರು ಸೇರಿದಂತೆ ಎಸ್ ಡಿ ಎಂ ಸಿ ಅಧ್ಯಕ್ಷ ಬಸವರಾಜ ನಾಲತವಾಡ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಚಿತ್ತರಗಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top