ಆರ್. ಎಸ್. ಎಸ್ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಡಾ. ಭರತ್ ಶೆಟ್ಟಿ ಕಿಡಿ
ಮಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿಷಕಾರಿ ಹಾವುಗಳಂತೆ. ಹಾವು ಬಂದರೆ, ನಮಾಜ್ ಅನ್ನು ಅರ್ಧಕ್ಕೆ ನಿಲ್ಲಿಸಿ ಅದನ್ನು ಕೊಲ್ಲಬೇಕು ಎಂದು ಹೇಳಿ ಪ್ರಚೋದನಾ ಹೇಳಿಕೆ ನೀಡಿದ್ದು ಖಂಡನೀಯ’ ಎಂದು ಬಿಜೆಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ಹೇಳಿದರು.
ರಾಜಕೀಯ ಲಾಭಕ್ಕಾಗಿ ಪದೇ ಪದೆ ಮಲ್ಲಿಕಾರ್ಜುನ ಖರ್ಗೆಯವರು ಹಿಂದೂ ವಿರೋಧಿ ಹಾಗೂ ಆರ್. ಎಸ್. ಎಸ್ ವಿರೋಧಿ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಇಂತಹ ಮನಸ್ಥಿತಿಯುಳ್ಳವರ ಕೈಯಲ್ಲಿ ಜನ ಅಧಿಕಾರ ನೀಡಿದರೆ ಸಮಾಜದಲ್ಲಿ ದಂಗೆ ಉಂಟಾಗುವುದರಲ್ಲಿ ಸಂಶಯವಿಲ್ಲ. ಸಮಾಜದ ಶಾಂತಿಗಾಗಿ ಕಾಂಗ್ರೆಸ್ ನ ಇಂತಹ ನೀಚ ಮನಸ್ಥಿತಿಯನ್ನು ಹೆಮ್ಮೆಟ್ಟಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


