ಫೆ. 18ರಿಂದ 28 ರವರೆಗೆ ನಡೆಯಲಿದೆ ಮಹಾಮಜ್ಜನ
ಕಾರ್ಕಳ: ಶ್ರವಣಬೆಳಗೊಳದ ನಂತರ ಅತಿ ಎತ್ತರದ ಏಕಶಿಲಾ ಗೊಮ್ಮಟೇಶ್ವರ ಮೂರ್ತಿ ಕಾರ್ಕಳದಲ್ಲಿದ್ದು, ಹನ್ನೆರಡು ವರ್ಷಗಳಿಗೊಮ್ಮೆ ನಡೆಯಲಿರುವ ಈ ಮಹಾಮಸ್ತಕಾಭಿಷೇಕವು 2027ರ ಫೆ. 18ರಿಂದ 28ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ಅಧ್ಯಕ್ಷ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ದಿನಾಂಕ ಘೋಷಣೆ ಮಾಡಿದರು.
ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ
ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆಯನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಹೆಗ್ಡೆ ಯವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ
ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ
ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ, ಅದಾನಿ
ಗ್ರೂಪ್ ಕರ್ನಾಟಕದ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಅಧ್ಯಕ್ಷರಾದ ಕಿಶೋರ್ ಅಳ್ವ, ಸಂಸದ ಕೋಟ
ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಹಾಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷ
ಕೆ.ಪಿ. ಜಗದೀಶ್ ಅಧಿಕಾರಿ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಇದರ
ಮ್ಯಾನೇಜಿಂಗ್ ಟ್ರಸ್ಟಿ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಎಸ್‌ಸಿಡಿಸಿಸಿ
ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಮಸ್ತಕಾಭಿಷೇಕ ಸಮಿತಿಯ ಮುಖ್ಯಸ್ಥರುಗಳಾದ ಪ್ರಭಾತ್
ಕುಮಾರ್, ಅನಂತರಾಜ ಪೂವಣಿ, ಸಂಪತ್ ಸಾಮ್ರಾಜ್ಯ, ಸುಧೀರ್ ಪಡಿವಾಳ್, ಕೆ. ಜಯಕೀರ್ತಿ ಕಡಂಬ, ಹೇಮಚಂದ್ರ
ಜೈನ್, ಸುನಿಲ್ ಕುಮಾರ್ ಬಜಗೋಳಿ, ಮಹಾವೀರ ಹೆಗ್ಡೆ, ಭರತ್ ಕುಮಾರ್ ಜೈನ್, ಶೀತಲ್ ಜೈನ್, ಸುಭಾಷ್ಚಂದ್ರ
ಚೌಟ, ಶಾಂತಿರಾಜ ಜೈನ್, ಮಹೇಂದ್ರ ವರ್ಮ ಜೈನ್, ಶಿಶುಪಾಲ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
.png)
