ಧರ್ಮಸ್ಥಳ: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಆರ್ಯಮನ್ ಹಾಗೂ ಕಿಯಾಂಶ್ ಉಪಸ್ಥಿತರಿದ್ದರು.
ಅನಂತರ ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರಿಂದ ಶ್ರೀ ಮಂಜುನಾಥ ಸ್ವಾಮಿಗೆ ರಂಗಪೂಜೆ ಸೇವೆ ನೆರವೇರಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

