ಸಂತ ಫಿಲೋಮಿನಾ ಕಾಲೇಜಿನ ಡಾ. ಕೆ. ಚಂದ್ರಶೇಖರ್ ಮತ್ತು ಲವಿಕಾ. ಜಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಕೆ. ಚಂದ್ರಶೇಖರ್ ಹಾಗೂ ಎನ್‌ಎಸ್‌ಎಸ್ ಘಟಕ ನಾಯಕಿ ಲವಿಕಾ ಜಿ., ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಭಾಗವಹಿಸಿದರು.


ವಾರಪೂರ್ತಿ ನಡೆದ ಈ ಶಿಬಿರವನ್ನು ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿತ್ತು. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಗೋವಾ ಹಾಗೂ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು. ಶಿಬಿರದ ಉದ್ದೇಶ ದೇಶದ ಏಕತೆ, ಸಾಂಸ್ಕೃತಿಕ ವಿನಿಮಯ ಹಾಗೂ ಯುವಕರಲ್ಲಿ ಐಕ್ಯತೆಯ ಮನೋಭಾವವನ್ನು ಬೆಳೆಸುವುದಾಗಿತ್ತು.


ಮಂಗಳೂರು ವಿಶ್ವವಿದ್ಯಾಲಯದ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಗುಂಪು ನೃತ್ಯ ಹಾಗೂ ಗುಂಪು ಗಾನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳನ್ನು ಪಡೆದು ವಿಶ್ವವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿತು. ಇವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೆನ್ಹಾಸ್ , ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ, ಪ್ರಾಂಶುಪಾಲರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top