ಪರಿಸರ ಪ್ರೇಮಿ ಉದ್ಯಮಿ ಡಾ. ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

Upayuktha
0


ಬೆಂಗಳೂರು: ಪರಿಸರವಾದಿ, ಉದ್ಯಮಿ ಹಾಗೂ ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಬಿ ಎಂ ಫಾರೂಕ್ ಅವರಿಗೆ ಬೆಂಗಳೂರು ನಗರ ಜಿಲ್ಲಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.


ನಗರದ ಜ್ಯೋತಿ ಸಭಾಂಗಣದಲ್ಲಿ ನಡೆದ ಐದನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.


ಸೋಲಾರ್ ಹಾಗೂ ಪವನ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಅನುಕರಣೀಯ ಸಾಧನೆ ಮಾಡಿರುವ ಡಾ. ಬಿ ಎಂ ಫಾರೂಕ್ ಅವರು ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.


ಬೆಂಗಳೂರು ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಹಾಗೂ ಮಾರುಕಟ್ಟೆ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಡಾ. ಫಾರೂಕ್, "ಫೀಜ್ಜಾ ಸಮೂಹ ಉದ್ಯಮ ಸಂಸ್ಥೆಗಳನ್ನು" ಸ್ಥಾಪಿಸಿದ್ದಾರೆ.


ಸೋಲಾರ್ ವಿದ್ಯುತ್ ಉತ್ಪಾದನೆ, ಪವನ ವಿದ್ಯುತ್ ಉತ್ಪಾದನೆ, ಕೃಷಿ ಸಂಸ್ಕರಣೆ ಮತ್ತು ಗಣಿಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಸಂಸ್ಥೆಗಳನ್ನು ನಡೆಸುವ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top