ಅವರು ಏ.16 ರಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಹಳೆಯ ವಿದ್ಯಾರ್ಥಿ ಸಂಘವಾದ 'ವೆನಮಿತಾ'ದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಯುಜಿ ಪ್ರಾಜೆಕ್ಟ್ಸ್ ನ ವಾರ್ಷಿಕ ಪ್ರದರ್ಶನ ಎಕ್ಸ್ಪ್ರೊ ೨೦೨೫-೨೦೨೬ ನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರವನ್ನು ಉತ್ತೇಜಿಸುವ ಕಲಿಕೆಯ ವಾತಾವರಣವನ್ನು ಬೆಳೆಸುವ ಸಂಸ್ಥೆಯ ಬದ್ಧತೆಯ ಬಗ್ಗೆ ತಿಳಿಯಪಡಿಸಿದರು.
ಈ ಪ್ರದರ್ಶನದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಒಟ್ಟು ೩೬೦ ಯೋಜನೆಗಳನ್ನು ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಎಕ್ಸ್ ಪ್ರೋ ಆಬ್ಸ್ಟ್ರ್ಯಾಕ್ಟ್ ವಾಲ್ಯೂಮ್-೨೪ ನ್ನು ಬಿಡುಗಡೆಗೊಳಿಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ಪ್ರತೀ ವಿಭಾಗದಲ್ಲಿ ಪ್ರದರ್ಶನಗೊಂಡ ಉತ್ತಮ ಪ್ರಾಜೆಕ್ಟ್ ಗಳಿಗೆ ವಿನಮಿತ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು.
ಎಕ್ಸ್ಪ್ರೊ ೨೦೨೫-೨೦೨೬ರ ಸಂಯೋಜಕಿ ಡಾ.ನಯನಾ ಶೆಟ್ಟಿ ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸ್ನೇಹಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

