ಮಡ್ಯಾರಿನಲ್ಲಿ ಉಚಿತ ರೇಬೀಸ್ ರೋಗನಿರೋಧಕ ಲಸಿಕೆ ಕಾರ್ಯಕ್ರಮ

Upayuktha
0


ಮಂಗಳೂರು: ವಿಶ್ವ ಪಶು ವೈದ್ಯಕೀಯ ದಿನಾಚರಣೆಯ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಸಂಘ ದಕ್ಷಿಣ ಕನ್ನಡ ಘಟಕದ ವತಿಯಿಂದ ಫೀಡ್ ಅನಿಮಲ್ಸ್ ಸೇವ್ ಅನಿಮಲ್ಸ್ ಟ್ರಸ್ಟ್ ಮತ್ತು ಅಸ್ಟ್ರಾ ಫೌಂಡೇಶನ್ ಸಹಭಾಗಿತ್ವದಲ್ಲಿ ಉಳ್ಳಾಲ ತಾಲೂಕಿನ ಮಡ್ಯಾರಿನಲ್ಲಿ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಹಾಗೂ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ರೋಗನಿರೋಧಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಉದ್ಘಾಟಿಸಿದರು. ಕರ್ನಾಟಕ ಪಶು ವೇದಿಕೆಯ ಸಂಘ ದಕ್ಷಿಣ ಕನ್ನಡದ ಅಧ್ಯಕ್ಷರಾದ ಡಾ. ಅರುಣ್ ಕುಮಾರ್ ಶೆಟ್ಟಿ ಅವರು ಪ್ರಸ್ತಾವಿಕ ಮಾತುಗಳನ್ನಾಡಿ ವಿಶ್ವ ಪಶು ವೈದ್ಯಕೀಯ ದಿನಾಚರಣೆಯ ಮತ್ತು ರೇಬಿಸ್ ರೋಗ ನಿರೋಧಕ ಲಸಿಕೆಯ ಮಹತ್ವವನ್ನು ತಿಳಿಸಿದರು. 


ಉದ್ಘಾಟನೆಯ ನಂತರ ಮಾತನಾಡಿದ ಸಂಸದರು ಈ ಕಾರ್ಯಕ್ರಮವು ಅತ್ಯಂತ ಮಹತ್ವಪೂರ್ಣ ಹಾಗೂ ಸಮಾಜಮುಖಿ ಕಾರ್ಯಕ್ರಮವಾಗಿದ್ದು ರೇಬಿಸ್ ರೋಗದ ನಿರ್ಮೂಲದ ಕಡೆಗೆ ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳು ಆಗಬೇಕಿದೆ ಎಂದು ಕರೆ ನೀಡಿದರು. 


ಕಾರ್ಯಕ್ರಮದಲ್ಲಿ ಫೀಡ್ ಅನಿಮಲ್ಸ್ ಸೇವ್ ಅನಿಮಲ್ಸ್ ಟ್ರಸ್ಟ್ ನ ಶ್ರೀಮತಿ ರಜನಿ ಶೆಟ್ಟಿ ಆಷ್ಟ್ರಾ ಫೌಂಡೇಶನ್ ನ ಶ್ರೀ ಲಂಚುಲಾಲ್ ಕರ್ನಾಟಕ ಪಶು ವೇದಿಕೆ ಸಂಘದ ಉಪಾಧ್ಯಕ್ಷರಾದ ಡಾ. ಚಂದ್ರಶೇಖರ್ ಭಟ್, ಕಾರ್ಯದರ್ಶಿಗಳಾದ ಡಾ.ನಿತಿನ್ ಪ್ರಭು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ಹರೀಶ ರಾವ್ ಪಶು ವೈದ್ಯಕೀಯ ಸಂಘದ ಸದಸ್ಯರು ಮತ್ತು ಶ್ವಾನಪ್ರಿಯರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top