ಸ.ಪ.ಪೂ ಕಾಲೇಜು (ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು: ಸತತ ಮೂರನೇ ಬಾರಿ ಶೇಕಡಾ 100 ಫಲಿತಾಂಶ

Upayuktha
0


ಮಣಿನಾಲ್ಕೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು ಸತತ ಮೂರನೇ ಬಾರಿ ಶೇಕಡಾ 100 ಫಲಿತಾಂಶವನ್ನು ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.


ಈ ವರ್ಷ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 43 ಆಗಿದ್ದು, ಅದರಲ್ಲಿ 17 ಮಂದಿ ಹುಡುಗರು ಹಾಗೂ 26 ಮಂದಿ ಹುಡುಗಿಯರು ಸೇರಿದ್ದಾರೆ. ವಿಶೇಷವೆಂದರೆ, ಎಲ್ಲಾ 43 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಶಾಲೆಯು ಶೇಕಡಾ 100 ಫಲಿತಾಂಶ ಸಾಧಿಸಿದೆ.


ಫಲಿತಾಂಶದ ವಿವರ ಪ್ರಕಾರ, 21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 1 ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.


ಗ್ರಾಮೀಣ ಪ್ರದೇಶದಲ್ಲಿರುವ ಈ ಶಿಕ್ಷಣ ಸಂಸ್ಥೆ ಉತ್ತಮ ಶೈಕ್ಷಣಿಕ ಸಾಧನೆ ಮಾತ್ರವಲ್ಲದೆ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಕಲಿಕಾ ಹಾಗೂ ಕಲಿಕೇತರ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುತ್ತಿದೆ.


ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಕ್ರಿಯ ಸಹಕಾರ ಪ್ರಮುಖ ಕಾರಣವಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಕಾಂತ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top