ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಮುಲ್ಕಿಯಲ್ಲಿ ನಿರ್ಮಾಣ ಹಂತದ ಸಭಾಭವನಕ್ಕೆ ತೋನ್ಸೆ ಆನಂದ ಶೆಟ್ಟಿ ಭೇಟಿ

Upayuktha
0


ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣಗೊಳ್ಳಲಿರುವ ಹವಾನಿಯಂತ್ರಿತ ಸಭಾಭವನದ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ವೇದಿಕೆ ನಿರ್ಮಾಣ ಹಂತದಲ್ಲಿದ್ದು ಈ ಸಂಬಂಧ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು.


ನಂತರ ಒಕ್ಕೂಟದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಸಭಾಭವನದ  ನಕ್ಷೆ ಮತ್ತು ಇತರ ಮಾಹಿತಿಯನ್ನು ನಿರ್ಮಾಣ ಕಾಮಗಾರಿಯ  ಶಿವಪ್ರಸಾದ್ ರೈ ಹಾಗೂ ಸಹಾಯಕ ಇಂಜಿನಿಯರ್ ಉಡುಪಿ ಏ ಜಿ ಅಸೋಸಿಯೇಟ್ ಧೀರಜ್ ಅವರಿಂದ ಪಡೆದುಕೊಂಡರು.


ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ  ಸ್ವಾಗತಿಸಿ ಗೌರವ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿ ಅವರು ಆನಂದ ಶೆಟ್ಟಿಯವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ರಂಗೋಲಿ ಚಂದ್ರಹಾಸ ಶೆಟ್ಟಿ, ಒಕ್ಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣರೈ ಕಂಟ್ರಾಕ್ಟರ್ ದಾರರು ಶಿವಪ್ರಸಾದ್ ರೈ ಧೀರಜ್ ಉಡುಪಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top