ಬಾಗಲಕೋಟೆ: ಜಿಲ್ಲೆಯ ಬೇವೂರಿನ ಆದರ್ಶ ಸಂಯುಕ್ತ ಪದವಿ ಪೂರ್ವ ಕಾಲೇಜು 2026 ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಕುಮಾರಿ ಅನುರಾಧ 94.66% (568) ಅಂಕ ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಶೃತಿ ಕಾವಳ್ಳಿ 92.16% (553) ಅಂಕ ಪಡೆದು ದ್ವಿತೀಯ ಸ್ಥಾನವನ್ನು, ಕುಮಾರಿ ಸೌಂದರ್ಯ ಮಾದರ 91% (546) ಅಂಕ ಪಡೆದು ತೃತೀಯ ಸ್ಥಾನವನ್ನು, ಕುಮಾರಿ ಜಯಶ್ರೀ ಬಿ ನಡಗಡ್ಡಿ 90.5% (543) ನಾಲ್ಕನೇ ಸ್ಥಾನವನ್ನು ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ.
ಪರೀಕ್ಷೆಗೆ ಕುಳಿತವರಲ್ಲಿ 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಫಸ್ಟ್ ಕ್ಲಾಸ್ ನಲ್ಲಿ 30 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ 08 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಒಟ್ಟಾರೆ ಪ್ರಥಮ ಶ್ರೇಣಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪರೀಕ್ಷಾ ಫಲಿತಾಂಶದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಜಿ.ಜಿ ಮಾಗನೂರು, ಉಪಾಧ್ಯಕ್ಷ ಆರ್. ಎಸ್ ವೈಜಾಪೂರ, ಸಂಸ್ಥೆಯ ಸರ್ವ ಸದಸ್ಯರು, ಪ್ರಾಚಾರ್ಯರಾದ ಶ್ರೀ ಜೆ ಕೆ ಮಲ್ಲಾಪೂರ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

