ಉಡುಪಿ: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ವತಿಯಿಂದ “ಬಜೆಟ್ 2026: ವಿಶ್ಲೇಷಣೆ ಮತ್ತು ಒಳನೋಟಗಳು” ಎಂಬ ವಿಷಯದ ಕುರಿತ ಕಾರ್ಯಾಗಾರ ಇತ್ತೀಚೆಗೆ ಕಾಲೇಜಿನ ಎವಿ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸಿಎ ಎಸ್. ಎಸ್. ನಾಯಕ್ ಎಂಎಸ್‌ಎಂಇ ಹಾಗೂ ಸ್ಟಾರ್ಟ್‌ಅಪ್ ಕ್ಷೇತ್ರದ ಮೇಲೆ ಬಜೆಟ್‌ನ ಪರಿಣಾಮಗಳನ್ನು ವಿವರವಾಗಿ ವಿಶ್ಲೇಷಿಸಿದರು. ರು ಉದ್ಯಮಶೀಲತೆಗೆ ದೊರೆಯುವ ಅವಕಾಶಗಳು, ತೆರಿಗೆ ಸಡಿಲಿಕೆಗಳು ಮತ್ತು ಹೊಸ ನೀತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಶ್ರೀ ರಾಜೇಶ್ ರಾವ್ ಎಂ ಬ್ಯಾಂಕಿಂಗ್ ಮತ್ತು ಆರ್ಥಿಕ ಕ್ಷೇತ್ರದ ದೃಷ್ಟಿಯಿಂದ ಬಜೆಟ್‌ನ ಪ್ರಮುಖ ಅಂಶಗಳನ್ನು ವಿವರಿಸಿ, ಹಣಕಾಸು ವ್ಯವಸ್ಥೆಯ ಮೇಲೆ ಅದರ ಪರಿಣಾಮಗಳನ್ನು ಸ್ಪಷ್ಟಪಡಿಸಿದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಜೆಟ್ ದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳು ಅದರ ಪರಿಣಾಮಗಳನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳುವುದು ಅಗತ್ಯವೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ದತ್ತ ಕುಮಾರ್, ಶ್ರೀ ಮರ್ವಿನ್ ಡಿಸೋಜಾ, ಶ್ರೀ ಬಾಲರಾಜ್ ಡಿ.ಬಿ., ಶ್ರೀಮತಿ ಸ್ಮಿತಾ ಹಾಗೂ ಅರವಿಂದ್ ಭಟ್, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ರಘು ನಾಯಕ್ ಕಾರ್ಯಕ್ರಮ ಸಂಯೋಜಿಸಿದ್ದು, ಅಂಕಿಅಂಶಶಾಸ್ತ್ರ ಪ್ರಾಧ್ಯಾಪಕ ಉಮೇಶ್ ಪೈ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಬಿಂದು ಟಿ ಕಾರ್ಯಕ್ರಮ ನಿರ್ವಹಿಸಿದರು. ಎಂ.ಕಾಂ ವಿದ್ಯಾರ್ಥಿ ಹನುಮಂತ ನಿರೂಪಿಸಿ, ಅಮೂಲ್ಯ ಸ್ವಾಗತಿಸಿದರು. ಶ್ರೀಲಕ್ಷ್ಮೀ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


