ಶ್ರೀ ಕೃಷ್ಣ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಗಾರ

Upayuktha
0

 


ಬೆಂಗಳೂರು: ಬನಶಂಕರಿ 3ನೇ ಹಂತದ ಐಟಿಐ ಲೇಔಟ್‌ನಲ್ಲಿರುವ ಶ್ರೀ ಕೃಷ್ಣ ಪಿಯು ಕಾಲೇಜಿನಲ್ಲಿ ಶ್ರೀ ಕೃಷ್ಣ ಸಂಸ್ಥೆ ಹಾಗೂ ಆಕಾಶ್ ಎಜುಕೇಶನ್ ಸರ್ವಿಸಸ್ ಇವರ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮದಲ್ಲಿ ಆಕಾಶ್ ಎಜುಕೇಶನ್ ಸರ್ವಿಸಸ್ ನಿರ್ದೇಶಕರಾದ ಹರೀಶ್, ಜಯನಗರ ಕೇಂದ್ರದ ಮುಖ್ಯಸ್ಥರಾದ ಗಿರೀಶ್, ರಾಜ್ಯ ನಿರ್ದೇಶಕರಾದ ರಾಜೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಜೊತೆಗೆ ಶ್ರೀ ಕೃಷ್ಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಸ್.ಪಿ. ಮನೋಹರ್, ಶಾಲಾ ನಿರ್ದೇಶಕರಾದ ಶಾಂತಲಾ ರವಿಶಂಕರ್, ಐಸಿಐಸಿಇ ಶಾಲೆಯ ಪ್ರಾಂಶುಪಾಲರಾದ ಪದ್ಮನವನೀತ್, ರಾಜ್ಯ ಪಠ್ಯ ಶಾಲೆಯ ಮುಖ್ಯ ಶಿಕ್ಷಕರಾದ ವನಿತಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.


ಮುಖ್ಯ ಅತಿಥಿಯಾದ ಶ್ರೀ ರಾಜೇಶ್ ಅವರು ಮಾತನಾಡುತ್ತಾ, ಎಸ್‌ಎಸ್‌ಎಲ್‌ಸಿ ನಂತರ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಆಯ್ಕೆ ಮಾಡಿಕೊಳ್ಳಬಹುದಾದ ವಿವಿಧ ಕೋರ್ಸ್‌ಗಳ ಬಗ್ಗೆ ವಿವರಿಸಿದರು. ಇಂಜಿನಿಯರಿಂಗ್, ಮೆಡಿಕಲ್, ಕಂಪ್ಯೂಟರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಅವಕಾಶಗಳು ಮತ್ತು ಭವಿಷ್ಯದಲ್ಲಿ ಲಾಭದಾಯಕವಾಗುವ ಮಾರ್ಗಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಮಗ್ರ ಮಾಹಿತಿ ನೀಡಿದರು. ಮುಂದಿನ ಶೈಕ್ಷಣಿಕ ವರ್ಷದಿಂದ ಶ್ರೀ ಕೃಷ್ಣ ಸಂಸ್ಥೆಯ ಸಹಯೋಗದಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸುವುದಾಗಿ ತಿಳಿಸಿದರು.


ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಅವರು ಮಾತನಾಡುತ್ತಾ, ಸಂಸ್ಥೆಯಲ್ಲಿ ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ಸಾಧನೆಯಾಗುತ್ತಿದೆ ಎಂದು ಹೇಳಿದರು. ಉತ್ತಮ ಶಿಕ್ಷಕ ವೃಂದದ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸಂಸ್ಥೆಗೆ ಸೇರಿಸುವಂತೆ ಮನವಿ ಮಾಡಿದರು. ಜೊತೆಗೆ ಆಕಾಶ್ ಎಜುಕೇಶನ್ ಸರ್ವಿಸಸ್ ಸಹಯೋಗದಲ್ಲಿ ಮುಂದಿನ ವರ್ಷ ವಿಜ್ಞಾನ ವಿಭಾಗ ಪ್ರಾರಂಭವಾಗಲಿದೆ ಎಂದು ತಿಳಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top