ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ಸಮರ್ಪಿಸಲಾಗುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಪ್ರಿಲ್ 21ರಂದು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಸಂಜೆ 3 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ.
ಮೇ 6ರಂದು ಸಂಜೆ ಜಗದ್ಗುರುಗಳು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು, ಮೇ 7ರಂದು ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮ ಜರಗಲಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಗುರುವಂದನಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಇಡಿಯ ಪುತ್ತೂರಿಗರ ವತಿಯಿಂದ ಜಗದ್ಗುರುಗಳ ವಂದನೆಗೆ ಭರದ ಸಿದ್ಧತೆ ನಡೆಯುತ್ತಿದೆ. ಹಿಂದೂ ಸಮಾಜದ ಸಮಸ್ತ ಸಮುದಾಯಗಳನ್ನೊಳಗೊಂಡ ಗುರುವಂದನಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


