ಎಚ್ ಭೀಮರಾವ್ ವಾಷ್ಠರ್ ಗೆ ಎಲಿಮಲೆಯಲ್ಲಿ ಸನ್ಮಾನ; ಕವಿಗೋಷ್ಠಿ

Upayuktha
0



ಸುಳ್ಯ: ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಎಲಿಮಲೆ ಪ್ರೌಢಶಾಲೆಯ ಕನ್ನಡ ಸಂಘ ಜಂಟಿ ಆಶ್ರಯದಲ್ಲಿ ಜರುಗಿದ ಚಾಂದ್ರಮಾನ ಮತ್ತು ಸೌರಮಾನ ಯುಗಾದಿ ವಿಶೇಷತೆಯ ಪ್ರಯುಕ್ತ ಜರುಗಿದ ಕವಿಗೋಷ್ಠಿ ಸಾಹಿತ್ಯ ಕಾರ್ಯಕ್ರಮವು ಎಲಿಮಲೆ ಪ್ರೌಢಶಾಲೆಯ ಅನ್ನಪೂರ್ಣೇಶ್ವರಿ ಭೋಜನ ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷರು, ಸಾಹಿತಿ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆಯ ಮುಖ್ಯ ಉಪಾಧ್ಯಾಯಿನಿ ಸಂಧ್ಯಾ ಕೆ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಶಿಕ್ಷಣ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಸಾಹಿತಿ ಅನುರಾಧಾ ಶಿವಪ್ರಕಾಶ್ ರವರ ಕವಿಗೋಷ್ಠಿ ಅಧ್ಯಕ್ಷತೆಯಲ್ಲಿ 15 ಜನ ಕವಿಗಳು ಕವನ ವಾಚಿಸಿದರು.


ಇದೇ ಸಂದರ್ಭ ಖ್ಯಾತ ಸಾಹಿತಿ ಜ್ಯೋತಿಷಿ, ಗಾಯಕ ಮತ್ತು ಚಂದನ ಸಾಹಿತ್ಯ ವೇದಿಕೆಯ ಗೌರವ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಅವರನ್ನು ಗಣ್ಯರು ಸಮ್ಮಾನಿಸಿ ಗೌರವಿಸಿದರು. ಮಹಿಳಾ ಸಾಹಿತಿ ಸಂಧ್ಯಾ ಕುಮಾರ್ ಅವರು ಮಾತನಾಡಿದರು. ಹಿರಿಯ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು ಮತ್ತು ಎಸ್ ಡಿ ಎಂ ಸಿ ಸಂಘದ ಪುರುಷೋತ್ತಮ್ ಮುಖ್ಯ ಅತಿಥಿಗಳಾಗಿದ್ದರು. ಯುವಕವಿ ಬಾಲಕೃಷ್ಣ ಕಡಬ ಮತ್ತು ಕನ್ನಡ ಸಂಘದ ಅಧ್ಯಕ್ಷರು ಹಾಗೂ ಕವಯಿತ್ರಿ ಮತ್ತು ಶಿಕ್ಷಕಿ ಸಂಗೀತಾ ರವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಾರ್ಥನೆ ಹಾಡಿದರು. ಲಾವಣ್ಯ ವಂದಿಸಿದರು. ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top