ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ 100ಕ್ಕೆ 100ರಷ್ಟು ಫಲಿತಾಂಶ

Upayuktha
0

ಶ್ರದ್ಧಾ ಕಟಗಿ ಪ್ರಥಮ: ಅನುಷಾ ಕೆಸರಭಾವಿ ದ್ವಿತೀಯ, ಭೂಮಿಕಾ ಪಾಟೀಲ ತೃತೀಯ





ಹುನಗುಂದ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಕ್ಕೆ ಈ ಬಾರಿ  ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 100ಕ್ಕೆ 100 ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.


2025-26 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಕು. ಶ್ರದ್ಧಾ ಕಟಗಿ 615 (98.40%) ಅಂಕ  ಪ್ರಥಮ ಸ್ಥಾನ, ಅನುಷಾ ಕೆಸರಭಾವಿ 614 (98.24%) dfvitI ಯ ಸ್ಥಾನ, ಹಾಗೂ ಭೂಮಿಕಾ ಪಾಟೀಲ 613 (98.08%)  ತೃತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ.


ಈ ಬಾರಿ ಶಾಲೆಯ ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 57 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ 100ಕ್ಕೆ 100ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.


ಈ ಎಲ್ಲ ಸಾಧಕ ವಿದ್ಯಾರ್ಥಿಗಳಿಗೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರು, ಮತ್ತು ಶಾಲೆಯ ಸರ್ವ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top