ನಾಳೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ-2026” ಉದ್ಘಾಟನೆ

Upayuktha
0

  • ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏಪ್ರಿಲ್ 6 ರಿಂದ 11ರತನಕ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ
  • ಏಪ್ರಿಲ್ 6 ರಂದು ಪುತ್ತೂರಿನ ವಿವೇಕಾನಂದ ಕೇಂದ್ರೀಯ ವಿದ್ಯಾಲಯ ಇದರ ಸಂಚಾಲಕರಾದ ಭರತ್ ಪೈಅವರಿಂದ ಉದ್ಘಾಟನೆ
  • ರಾಜ್ಯ ಹಾಗೂ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು 

ಪುತ್ತೂರು: ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 6 ರಿಂದ 11ರತನಕ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2026” ನಡೆಯಲಿದೆ. ಆರು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳು ಅವಧಿಗಳನ್ನು ನಡೆಸಿಕೊಡಲಿದ್ದಾರೆ.


ಉದ್ಘಾಟನಾ ಕಾರ್ಯಕ್ರಮ - 

ಏಪ್ರಿಲ್ 6 ರಂದು ಪುತ್ತೂರಿನ ವಿವೇಕಾನಂದ ಕೇಂದ್ರೀಯ ವಿದ್ಯಾಲಯ ಇದರ ಸಂಚಾಲಕರಾದ ಭರತ್ ಪೈಶಿಬಿರವನ್ನು ಉದ್ಘಾಟಿಸಲಿದ್ದಾರೆ.  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಉಪಸ್ಥಿತರಿರಲಿದ್ದಾರೆ. 


ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗಿ - 

ಶಿಬಿರದಲ್ಲಿ ಬೆಂಗಳೂರಿನ ಶೈಕ್ಷಣಿಕ ಸಲಹೆಗಾರರು ಹಾಗೂ ಸೃಜನಶೀಲ ಪ್ರಯೋಗಗಳ ಮೂಲಕ ಹೆಸರುವಾಸಿಯಾದ ರಾಜೇಶ್ ಭಟ್, ಹಲವಾರು ರಾಷ್ಟ್ರೀಯ-ಅಂತಾರಾಷ್ಟ್ರೀಯ ಗಾಳಿಪಟೋತ್ಸವಗಳಲ್ಲಿ ಭಾಗವಹಿಸಿದ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ, ಪರಿಸರ ತಜ್ಞ ದಿನೇಶ್ ಹೊಳ್ಳ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಅವಧಿಗಳನ್ನು ನಡೆಸಿಕೊಡಲಿದ್ದಾರೆ. 


ಆರು ದಿನಗಳ ಕಾಲಶಿಬಿರ -

ಆರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಏಪ್ರಿಲ್ 6 ರಿಂದ ಆರಂಭಗೊಂಡು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 3.30 ರವರೆಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ, ತಂತ್ರಜ್ಞಾನ, ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು ನಡೆಯಲಿವೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ದೂರದೂರುಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಕಾಲೇಜಿನ ವತಿಯಿಂದ ವಸತಿ ವ್ಯವಸ್ಥೆಯನ್ನು ಆಯೋಜಿಸಲಾಗಿದೆ. ಬೆಟ್ಟಂಪಾಡಿ,ಪೆರ್ಲ ಹಾಗೂ ಉಪ್ಪಿನಂಗಡಿಯಿಂದ ಕಾಲೇಜು ಬಸ್ ವ್ಯವಸ್ಥೆ ಇರಲಿದೆ.


ಶಿಬಿರದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು www.vivekanandapuc.com/eureka ಲಿಂಕ್ ಮೂಲಕ ತಮ್ಮ ಹೆಸರನ್ನು ತಕ್ಷಣ ನೋಂದಾಯಿಸಿಕೊಳ್ಳಬಹುದು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8095525692, 9961314385, 9972635348 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top