ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚಿಸಿದ ಸಹಾಯಕ ಕಾರ್ಮಿಕ ಆಯುಕ್ತರು

Upayuktha
0

ಮಂಗಳೂರು: ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ.

       ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು  ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top