ಮಂಗಳೂರು: ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಇಂದು (ಏ.21) ಜಗಜ್ಯೋತಿ ಮಾನವತಾವಾದಿ ವಿಶ್ವಖ್ಯಾತಿ ಬಸವಣ್ಣನವರ ಜನ್ಮದಿನಾಚರಣೆಯನ್ನು ಅತ್ಯಂತ ಭಾವಪೂರ್ಣವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಸ್ಥೆಯ ಗೀತೆಯೊಂದಿಗೆ ಚಾಲನೆಯನ್ನು ನೀಡಲಾಯಿತು. ಆರಂಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅವರ ಮಹಾನ್ ಆದರ್ಶಗಳಿಗೆ ಗೌರವ ಅರ್ಪಿಸಲಾಯಿತು. ನಂತರ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅವರು ಅಧ್ಯಕ್ಷೀಯ ಭಾಷಣ ಮಾಡುತ್ತಾ, ಬಸವಣ್ಣನವರ ಚಿಂತನೆಗಳು ಸಮಾಜದ ಸುಧಾರಣೆಗೆ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.
ಅವರು ಸಮಾನತೆ, ನ್ಯಾಯ ಮತ್ತು ಮಾನವೀಯತೆ ಎಂಬ ಮೌಲ್ಯಗಳನ್ನು ಬಲಪಡಿಸುವಲ್ಲಿ ಬಸವಣ್ಣನವರ ಪಾತ್ರ ಮಹತ್ತರವಾಗಿದೆ ಎಂದು ಉಲ್ಲೇಖಿಸಿದರು. ಇಂದಿನ ಯುವಜನತೆ ಈ ಆದರ್ಶಗಳನ್ನು ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಅಭಿಪ್ರಾಯಪಟ್ಟರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಸುಚಿತ್ರ ಶೆಟ್ಟಿ ಅವರು ಪ್ರಾಸ್ತಾವಿಕ ನುಡಿಗಳ ಮೂಲಕ ಬಸವಣ್ಣನವರ ಜೀವನದ ಉನ್ನತ ಮೌಲ್ಯಗಳು, ಸಮಾನತೆಯ ಸಂದೇಶ ಮತ್ತು ಶ್ರಮದ ಮಹತ್ವವನ್ನು ವಿವರಿಸಿದರು. ಅವರು ಬಸವಣ್ಣನವರು ಸ್ಥಾಪಿಸಿದ “ಕಾಯಕವೇ ಕೈಲಾಸ” ಎಂಬ ತತ್ವವು ಇಂದಿನ ಸಮಾಜದಲ್ಲಿಯೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ಅತ್ಯಂತ ಮುಖ್ಯವೆಂದು ಹೇಳಿದರು.
ಜೊತೆಗೆ, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯತೆಯನ್ನು ಮನದಟ್ಟಾಗುವಂತೆ ವಿವರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಪ್ರಾರ್ಥನಾ ಪ್ರಥಮ ಬಿ.ಸಿ.ಎ, ಗಗನಶ್ರೀ ಪ್ರಥಮ ಬಿ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷನ್ ಹಾಗೂ ಇಂಚರ ಶೆಟ್ಟಿ ದ್ವಿತೀಯ ಬಿ.ಸಿ.ಎ ಇವರು ಬಸವಣ್ಣನವರ ಅರ್ಥಪೂರ್ಣ ಪ್ರವಚನ ಹಾಗೂ ಭಾಷಣಗಳನ್ನು ಮಾಡಿ, ಅವರ ವಚನಗಳ ಆಳವಾದ ಅರ್ಥವನ್ನು ಎಲ್ಲರಿಗೂ ಮನದಟ್ಟಾಗುವಂತೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಲಿಖಿತ ಅವರು ಸ್ವಾಗತ ಭಾಷಣವನ್ನು ನೆರವೇರಿಸಿ ಎಲ್ಲರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಕೊನೆಯಲ್ಲಿ ದ್ವಿತೀಯ ಬಿ.ಎಸ್ಸಿ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿನಿ ಗ್ರೀಷ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮವನ್ನು ರತನ್ ಪ್ರಥಮ ಬಿ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷನ್ ಅವರು ಸಮರ್ಪಕವಾಗಿ ನಿರೂಪಣೆ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಬೆಳೆಸುವ ಜೊತೆಗೆ, ನೈತಿಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

