ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಕನ್ನಡ ಪುಸ್ತಕಗಳಿಗೆ ಬಹುಮಾನ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025 ರ ಕ್ಯಾಲೆಂಡರ್ ವರ್ಷದಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ವೆಬ್ಸೈಟ್ https://kpp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ಅರ್ಜಿ
ಸಲ್ಲಿಸಬಹುದಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆಗಳ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ
ನಮೂನೆಯೊಂದಿಗೆ ಮೇ 11 ರ ಒಳಗಾಗಿ ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು
ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,
ಜೆ.ಸಿ. ರಸ್ತೆ, ಬೆಂಗಳೂರು
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳ
ಕಚೇರಿ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


