ಬಿಜೆಪಿ- ಆರ್‌ಎಸ್‌ಎಸ್ ವಿರುದ್ಧ ಹಿಂಸೆಗೆ ಹೇಳಿಕೆ ಖಂಡನೀಯ: ಶಾಸಕ ಕಾಮತ್

Upayuktha
0


ಮಂಗಳೂರು: ಚುನಾವಣಾ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


“ನಮಾಜ್ ಮಾಡುವಾಗ ವಿಷಪೂರಿತ ಹಾವು ಕಂಡರೆ, ಪ್ರಾರ್ಥನೆ ನಿಲ್ಲಿಸಿ ಮೊದಲು ಆ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಸೂಚಿಸುತ್ತದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷಪೂರಿತ ಹಾವಿನಂತೆ. ಆ ಹಾವನ್ನು ನಿರ್ಮೂಲನೆ ಮಾಡದಿದ್ದರೆ ನಿಮಗೆ ಬದುಕುಳಿಯಲು ಸಾಧ್ಯವಿಲ್ಲ” ಎಂದು ದ್ವೇಷಪೂರಿತ ಭಾಷಣ ಮಾಡಿ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾದರೂ, ಅಪಾಯಕಾರಿ ಕೃತ್ಯಕ್ಕೆ ಇನ್ನೊಬ್ಬರನ್ನು ಪ್ರೇರೇಪಿಸಿ ಕೋಮುಗಲಭೆಗೆ ಕುಮ್ಮಕ್ಕು ನೀಡುವುದನ್ನು ಒಪ್ಪಲು ಸಾಧ್ಯವೇ ಇಲ್ಲವೆಂದರು.


ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಬಿಗಿಯುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವೇ ದ್ವೇಷ ಮತ್ತು ವಿಭಜನೆ. ಇಂತಹವರು ರಾಜ್ಯದಲ್ಲಿ ದ್ವೇಷ ಭಾಷಣ ಮಸೂದೆ ಜಾರಿ ಮಾಡಲು ಹೊರಟಿದ್ದರು ಎಂಬುದೇ ಹಾಸ್ಯಾಸ್ಪದ. ಸಾರ್ವಜನಿಕ ಜೀವನದಲ್ಲಿ ಇರುವವರು ತಮ್ಮ ಹೊಣೆಗಾರಿಕೆಯನ್ನು ಅರಿತು ನಡೆದುಕೊಳ್ಳಬೇಕು. ಈ ಕೂಡಲೇ ಖರ್ಗೆಯವರು ಬಿಜೆಪಿ-ಆರ್‌ಎಸ್‌ಎಸ್ ಹಾಗೂ ದೇಶದ ಜನತೆಯ ಬಳಿ ಕ್ಷಮೆಯಾಚನೆ ಮಾಡಬೇಕು ಎಂದು ಶಾಸಕರು ಒತ್ತಾಯಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top