ಸುರತ್ಕಲ್: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಬೆಳವಣಿಗೆಗೆ ಸ್ಥಳೀಯ ಉದ್ಯಮಗಳು ಆದ್ಯತೆಯ ನೆಲೆಯಲ್ಲಿ ಅನುದಾನಗಳನ್ನು ನೀಡಬೇಕು. ಈ ನಿಟ್ಟಿನಲ್ಲಿ ನಮ್ಮೆಲ್ಲರ ತ್ಯಾಗದ ಪ್ರತೀಕವಾಗಿರುವ ನವ ಮಂಗಳೂರು ಬಂದರು ಪ್ರಾಧಿಕಾರದ ಕೊಡುಗೆ ಶ್ಲಾಘನೀಯ ಎಂದು ಪಣಂಬೂರು ಮೊಗವೀರ ಮಹಾ ಸಭೆಯ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿಸಂಘದ ಅಧ್ಯಕ್ಷ ಮಾಧವ ನುಡಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಕುಳಾಯಿ ಚಿತ್ರಾಪುರದಲ್ಲಿ ನೂತನವಾಗಿ ನವ ಮಂಗಳೂರು ಬಂದರು ಪ್ರಾಧಿಕಾರದ ಅನುದಾನದಲ್ಲಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ನವ ಮಂಗಳೂರು ಲಯನ್ಸ್ ಕ್ಲಬ್ ನ ಮನೋಜ್ ಕುಮಾರ್ ತಣ್ಣೀರುಬಾವಿ ಮಾತನಾಡಿಸರಕಾರಿ ಶಾಲಾ ಅಭಿವೃದ್ಧಿಗೆ ಕೈಗಾರಿಕೆ ಮತ್ತು ಸಾಮಾಜಿಕ ಸಂಸ್ಥೆಗಳು ವಿಶೇಷ ಕೊಡುಗೆ ನೀಡುತ್ತಿದ್ದು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗುತ್ತಿವೆ ಎಂದರು.
ನಿವೃತ್ತ ಹಿರಿಯ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಸೌಲಭ್ಯಗಳು ಲಭ್ಯವಾಗುತ್ತಿದ್ದು ಪೋಷಕರು ಇದರ ಪ್ರಯೋಜನ ಪಡೆಯ ಬೇಕೆಂದರು. ನೂತನ ಧ್ವನಿವರ್ಧಕ ವ್ಯವಸ್ಥೆಯನ್ನು ಇಂಡಿಯನ್ ಬ್ಯಾಂಕ್ ಕುಳಾಯಿ ಶಾಖೆಯು ಕೊಡುಗೆಯಾಗಿ ನೀಡಿದ್ದು ಇದನ್ನು ಉದ್ಘಾಟಿಸಿದ ಬ್ಯಾಂಕ್ ಮ್ಯಾನೇಜರ್ ಶರತ್ ಮಾತನಾಡಿ ಬ್ಯಾಂಕ್ ಶಾಲೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತದೆ ಎಂದರು.
ಶಾಲೆಯ ಸೌಲಭ್ಯದ ಮಾಹಿತಿ ಪತ್ರ ಮತ್ತು ದಾಖಲಾತಿ ಅಭಿಯಾನದ ಪತ್ರವನ್ನು ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಮತ್ತು ಕೂಳೂರು ಮೊಗವೀರ ಮಹಾ ಸಭಾದ ಅಧ್ಯಕ್ಷ ಭರತ್ ಕುಮಾರ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದೇವದಾಸ ಕುಳಾಯಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸಾಮಾಜಿಕ ಸೇವಾ ಸಂಘಟಕ ಸುನೀಲ್ ಕುಲಾಯಿ ಮಾತನಾಡಿ ಈ ಶಾಲೆಯು ಮಾದರಿ ಶಾಲೆಯಾಗಿದ್ದು ಹೆಚ್ಚಿನ ಅನುದಾನಗಳ ಲಭ್ಯತೆಗೆ ಪ್ರಯತ್ನ ಮಾಡಲಾಗುವುದೆಂದರು.
ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಒಂದರಿಂದ ಐದನೇ ತರಗತಿಯ ವರೆಗೆ ಆಂಗ್ಲ ಮಾಧ್ಯಮದ ತರಗತಿಗಳು ಪ್ರಾರಂಭ ವಾಗುತ್ತಿದ್ದು ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದೆ ಎಂದರು.
ಏಳನೇ ತರಗತಿಯ ನಿರ್ಗಮನ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳ ಶುಭ ಹಾರೈಸಿದರು. ನವ ಮಂಗಳೂರು ಲಯನ್ಸ್ ಕ್ಲಬ್ ಕಾರ್ಯ ದರ್ಶಿ ಮುರಳೀಧರ ಕುಳಾಯಿ, ಹಳೆ ವಿದ್ಯಾರ್ಥಿ ಸಂಘ ದ ಸದಸ್ಯ ತೇಜಪಾಲ್ ಕೂಳೂರು, ಶ್ರೀನಿವಾಸ ರಾವ್, ಹಿರಿಯ ಶಿಕ್ಷಕಿಯರಾದ ಸುಕೇಶಿನಿ, ನೀತಾ ತಂತ್ರಿ, ಸಿಂತಿಯ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಶಿಕ್ಷಕಿ ರೂಪ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

