ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಬ್ರಿಡ್ಜ್ ಕೋರ್ಸ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳ ಆರಂಭ

Upayuktha
0


ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮೌಲ್ಯಾಧಾರಿತ ಆಧುನಿಕ ವಿದ್ಯಾಭ್ಯಾಸವನ್ನು ನೀಡುವ ಯೋಜನೆಯೊಂದಿಗೆ ಆರಂಭಗೊಂಡ ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 15 ರಂದು ಉಚಿತ ಬ್ರಿಡ್ಜ್ ಕೋರ್ಸ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ ವಿದ್ಯುಕ್ತವಾಗಿ ನೆರವೇರಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು ಅವರು , ಅಕ್ಷಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿರುವ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರ ಭವಿಷ್ಯಕ್ಕೆ ಭದ್ರಬುನಾದಿಯನ್ನು ಒದಗಿಸುವ ನಿಟ್ಟಿನಲ್ಲಿ ಉಚಿತ ತರಬೇತಿಗಳನ್ನು ನೀಡುವ ಮೂಲಕ ಶೈಕ್ಷಣಿಕವಾಗಿ ಹೊಸ ಸಾಧನೆಯ ಹೆಜ್ಜೆ ಗುರುತುಗಳನ್ನು ಮೂಡಿಸಿದೆ ಎಂದರು.


ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಶ್ರೀ ಅಭಿಲಾಷ್ ಕ್ಷತ್ರಿಯ ಮಾತನಾಡಿ ದೊಡ್ಡ ನಗರಗಳಲ್ಲಿ ಮಾತ್ರ ಸಿಗುವ ಉಚಿತ ತರಬೇತಿ ಸೌಲಭ್ಯಗಳನ್ನು ನಾವು ನೀಡುತ್ತಿದ್ದೇವೆ.ಇದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಾಗಿ ಅವರ ಮುಂದಿನ ಹಂತದ ವಿದ್ಯಾಭ್ಯಾಸ ಸುಲಭವಾಗುತ್ತದೆ ಎಂದರು.


ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಮಾತನಾಡಿ ವಿದ್ಯಾರ್ಥಿಗಳು ತಮ್ಮೆದುರು ತರೆದುಕೊಳ್ಳುವ ಅತ್ಯುತ್ತಮ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ ಎ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top