ಅನಧಿಕೃತ ವಾಹನ ತಪಾಸಣೆ ತಡೆಗೆ ಡಿಜಿಪಿಗೆ ಪತ್ರ

Upayuktha
0



ಬೆಂಗಳೂರು: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಪಡೆಯ ಕೆಲ ಸಿಬ್ಬಂದಿಗಳು ನಿಯಮಬಾಹಿರವಾಗಿ ವಾಹನ ತಪಾಸಣೆ ನಡೆಸಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಡಿಜಿ ಮತ್ತು ಐಜಿಪಿಗೆ ಪತ್ರ ಬರೆದಿದ್ದಾರೆ.


ಮೋಟಾರ್ ವಾಹನ ಕಾಯ್ದೆ–1988 ಮತ್ತು ಕರ್ನಾಟಕ ಮೋಟಾರ್ ವಾಹನ ನಿಯಮಗಳು–1989ರ ಪ್ರಕಾರ, ಸಹಾಯಕ ಪೊಲೀಸ್ ಉಪ ನಿರೀಕ್ಷಕ (ಎ.ಎಸ್‌.ಐ) ಮತ್ತು ಮೇಲಿನ ಹುದ್ದೆಯ ಅಧಿಕಾರಿಗಳಿಗೆ ಮಾತ್ರ ವಾಹನ ತಪಾಸಣೆ ಹಾಗೂ ದಂಡ ವಿಧಿಸುವ ಅಧಿಕಾರವಿದೆ. ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ರಿಗೆ ಎಫ್‌ಟಿವಿಆರ್ ವರದಿ ಆಧಾರದಲ್ಲಿ ಚಲನ್ ನೀಡಲು ಮಾತ್ರ ಅವಕಾಶವಿದೆ.


ಆದರೆ, ಅಧಿಕಾರವಿಲ್ಲದ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪಡೆಯ ಸಿಬ್ಬಂದಿಗಳು ಅಧಿಕಾರಿಗಳಿಲ್ಲದೆ ವಾಹನಗಳನ್ನು ತಡೆದು ತಪಾಸಣೆ ನಡೆಸುವುದು, ವಾಹನಗಳ ಕೀ ಕಿತ್ತುಕೊಳ್ಳುವುದು, ಕೇಸ್ ಹಾಕುವುದಾಗಿ ಬೆದರಿಸುವುದು ಸೇರಿದಂತೆ ದೌರ್ಜನ್ಯ ನಡೆಸುತ್ತಿರುವ ಆರೋಪಗಳು ಕೇಳಿಬಂದಿವೆ. ಗ್ರಾಮಾಂತರ ಪ್ರದೇಶಗಳು, ಚೆಕ್‌ಪೋಸ್ಟ್‌ಗಳು ಮತ್ತು ಹೆದ್ದಾರಿಗಳಲ್ಲಿ ಅನಧಿಕೃತ ತಪಾಸಣೆ ಹಾಗೂ ಅಕ್ರಮ ಹಣ ವಸೂಲಿ ನಡೆಯುತ್ತಿರುವ ಬಗ್ಗೆ ದೂರುಗಳು ವ್ಯಕ್ತವಾಗಿವೆ.


ಈ ಸಂಬಂಧದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ದೂರವಾಣಿ ಮೂಲಕ ಹಾಗೂ ಪ್ರಾಧಿಕಾರಕ್ಕೆ ನೇರವಾಗಿ ದೂರು ನೀಡಿದ್ದಾರೆ.


ಈ ಹಿನ್ನೆಲೆಯಲ್ಲಿ, ಅಧಿಕಾರ ಹೊಂದಿರುವವರ ಹೊರತುಪಡಿಸಿ ಇತರರು ವಾಹನ ತಪಾಸಣೆ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸುವುದು ಮತ್ತು ಈ ರೀತಿಯ ದುರ್ನಡತೆ ಮರುಕಳಿಸದಂತೆ ದಿನನಿತ್ಯ ರೋಲ್ ಕಾಲ್ ವೇಳೆ ಸಿಬ್ಬಂದಿಗೆ ಎಚ್ಚರಿಕೆ ನೀಡುವಂತೆ ಡಿಜಿಪಿಗೆ ಮನವಿ ಮಾಡಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top