ಮಂಗಳೂರು:
ಮೈ ಜಿ ಪ್ಯೂಚರ್ ಕಂಪೆನಿ
ಹಾಗೂ ಅಕ್ಷಯಪಾತ್ರಾ ಫೌಂಡೇಶನ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಬ್ಯುಸಿನೆಸ್ ಮ್ಯಾನೇಜರ್, ಕ್ಯಾಟಗರಿ ಬ್ಯುಸಿನೆಸ್ ಮ್ಯಾನೇಜರ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಶೋ ರೂಮ್ ಸೇಲ್ಸ್,
ಕಸ್ಟಮರ್ ಸರ್ವೀಸ್/ಡಿಲೈಟ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಡಿಸ್ಪಾಚ್ ಹಾಗೂ ಡ್ರೈವರ್, ಪ್ರೊಡಕ್ಷನ್
ಹೆಲ್ಪರ್ ಮತ್ತು ಅಡುಗೆ ಕೆಲಸಗಾರರು (ಕುಕ್) ಹುದ್ದೆಗಳಿಗೆ ನೇರ ಸಂದರ್ಶನವನ್ನು ಏಪ್ರಿಲ್
22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1-30 ರವರೆಗೆ
ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ ಮೇಲ್ಪಟ್ಟ ವಿದ್ಯಾರ್ಹತೆ
ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು
ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


