ಮಾಣಿಲ ಗ್ರಾಮ ಪಂಚಾಯತ್‌ನಲ್ಲಿ ಲಸಿಕಾ ಜಾಗೃತಿ ಕಾರ್ಯಕ್ರಮ

Upayuktha
0


 

ಮಾಣಿಲ: ಜಿಲ್ಲಾಡಳಿತದ ಸಹಯೋಗದೊಂದಿಗೆ ಗ್ರಾಮ ಅಭಿವೃದ್ಧಿ ಯೋಜನೆ ಎಂಬ ಕೇಂದ್ರ ಸರ್ಕಾರದ ಉನ್ನತ ಭಾರತ ಅಭಿಯಾನದ ಭಾಗವಾಗಿ ಮಾಣಿಲ ಗ್ರಾಮ ಪಂಚಾಯತ್, ನಿಟ್ಟೆ ವಿಶ್ವವಿದ್ಯಾನಿಲಯದ ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದಲ್ಲಿ ಮಾಣಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರಇಮ್ಯೂನೈಸೇಶನ್ ವೀಕ್ಆಚರಿಸಲಾಯಿತು.

 

ನಿಟ್ಟೆ ವಿವಿಯ ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ನ ಡಾ.ಮ್ಯಾಕ್ವಿನ್, ಡಾ.ಶ್ರೀಶರತ್ ಕೆ., ಪ್ರಜ್ವಲ್ ಜ್ಯುಪಿಟರ್ ಲೋಬೋ ಅವರ ಮಾರ್ಗದರ್ಶನದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆಗಳ ಬಗೆಗೆ ಜಾಗೃತಿ ಮೂಡಿಸುವ ಕಿರು ನಾಟಕವನ್ನು ಪ್ರದರ್ಶಿಸಿದರು. ರಸಪ್ರಶ್ನೆಯನ್ನು ನಡೆಸಿಕೊಟ್ಟರು. ಮಕ್ಕಳಿಗೆ ಲಸಿಕೆ ನೀಡಬೇಕಾದ ವೇಳಾಪಟ್ಟಿಯನ್ನು ತಿಳಿಸಿಕೊಟ್ಟರು.

 

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸುಮಲತಾ ಉಪಸ್ಥಿತರಿದ್ದರು. ಮಾಣಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ್ ಕಮ್ಮಜೆ ಸ್ವಾಗತಿಸಿದರು. ಡಾ.ಶರಣ್ಯಾ ವಂದಿಸಿದರು. ವೈದ್ಯಕೀಯ ವಿದ್ಯಾರ್ಥಿನಿ ಅನೂಷಾ ಕಾರ್ಯಕ್ರಮ ನಿರ್ವಹಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top