ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕಕ್ಕೆ ಮೋದಿ ಕೊಡುಗೆ: ಡಾ. ಉಮೇಶ್ ಜಾಧವ್

Upayuktha
0


 


ಕಲಬುರಗಿ: ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಶುಭಾರಂಭಗೊಳ್ಳುತ್ತಿದ್ದು ಮುಂಬೈ - ಬೆಂಗಳೂರು ನಡುವಣ ಈ ರೈಲು  ಕಲ್ಯಾಣ ಕರ್ನಾಟಕದ ಮೂಲಕ ಸಂಚರಿಸುವ ಕೊಡುಗೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಕೇಂದ್ರ ಸರಕಾರಕ್ಕೆ  ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್ ಅಭಿನಂದನೆ ಸಲ್ಲಿಸಿದ್ದಾರೆ.


ಮುಂಬೈ- ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಸಂಪರ್ಕಿಸುತ್ತಿರುವುದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಈ ಭಾಗದ ಪ್ರಯಾಣಿಕರಿಗೆ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಕೊಡುಗೆಯಾಗಿ ನೀಡಿರುವುದರಿಂದ ಈ ಭಾಗದ ಜನರಿಗೆ ಹರ್ಷವನ್ನುಂಟು ಮಾಡಿದೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ, ಕೇಂದ್ರದ ಸಚಿವ ಪ್ರಲ್ಹಾದ ಜೋಶಿಯವರ ಪ್ರಯತ್ನದಿಂದ ಕಲ್ಯಾಣದ ಹೆಬ್ಬಾಗಿಲು ಕಲಬುರಗಿಯ ಮೂಲಕ ಮುಂಬೈಗೆ ವಂದೇ ಭಾರತ್ ಸಂಚರಿಸಲು ಅನುಮತಿ ನೀಡಿರುವುದು ಖುಷಿಯ ಸಂಗತಿ.  ವಂದೇ ಭಾರತ್ ರೈಲು ವಾಣಿಜ್ಯ ನಗರಿ ಮುಂಬೈ ಮತ್ತು ಸಿಲಿಕಾನ್ ಸಿಟಿ ಬೆಂಗಳೂರನ್ನು ಸಂಪರ್ಕಿಸುವ ಮೂಲಕ ಕೈಗಾರಿಕೆ ಮತ್ತು ವ್ಯಾಪಾರೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ವಂದೇ ಭಾರತ್ ಸೂಪರ್ ರೈಲು ಲಭ್ಯವಾಗಲು ಪ್ರಯತ್ನ ಮಾಡಿದ ಕಲ್ಯಾಣ ಕರ್ನಾಟಕ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಎಲ್ಲ ಪದಾಧಿಕಾರಿಗಳನ್ನು ಅಭಿನಂದಿಸುವುದಾಗಿ ಡಾ.ಜಾಧವ್ ತಿಳಿಸಿದ್ದಾರೆ.


ಕಳೆದ ಎರಡು ವರ್ಷಗಳಲ್ಲಿ ಕಲಬುರಗಿ ಬೆಂಗಳೂರು ಮಧ್ಯೆ ಸಂಚರಿಸುವ ವಂದೇ ಭಾರತ್ ಪ್ರಯಾಣಿಕರ ದಟ್ಟಣೆಯಿಂದ ಲಾಭದಾಯಕವಾಗಿ ನಡೆಯುತ್ತಿದ್ದು ವಂದೇ ಭಾರತ್ ಸ್ಲೀಪರ್ ರೈಲುಗಾಡಿಗೆ ಪ್ರಯಾಣಿಕರು ಉತ್ತಮ ಸ್ಪಂದನ ನೀಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಪರಿಕಲ್ಪನೆಯ ಅಂಗವಾಗಿ ಸಾರಿಗೆ ಮತ್ತು ಸಂಪರ್ಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿದ್ದು ಭೂ ಸಾರಿಗೆ ಮತ್ತು ರೈಲ್ವೆ ಸಾರಿಗೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲಾಗುತ್ತಿದೆ. ಶೀಘ್ರದಲ್ಲಿ ಕಲಬುರಗಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ವಿಮಾನ ಸಂಚಾರವು ಪ್ರಾರಂಭವಾಗುವ ಸೂಚನೆ ಬಂದಿದ್ದು ಕೇಂದ್ರ ಸರ್ಕಾರವು ಅತ್ಯಂತ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೇಂದ್ರ ಸರ್ಕಾರದ ಈ ಘೋಷಣೆಯಿಂದ ಮತ್ತಷ್ಟು ಪ್ರಗತಿಗೆ ಪೂರಕವಾಗಲಿದೆ ಎಂದು ಡಾ. ಉಮೇಶ್ ಜಾಧವ್ ಪತ್ರಿಕ ಹೇಳಿಕೆಯಲ್ಲಿ ಕೇಂದ್ರ ಸರಕಾರಕ್ಕೆ ಅಭಿನಂದನೆ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top