ಮುಕ್ಕ: ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ "ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ"ಗಳ ಕುರಿತು ಆಯೋಜಿಸಿದ ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.
ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ
ಅತ್ಯುನ್ನತ ಅಂತರಿಕ್ಷ ಸಂಸ್ಥೆ "ಇಸ್ರೋ" ಮಾಜಿ ಅಧ್ಯಕ್ಷರು ಹಾಗೂ "ಪದ್ಮಶ್ರೀ"
ಪುರಸ್ಕೃತರಾದ ಶ್ರೀ ಎ. ಎಸ್. ಕಿರಣ್ ಕುಮಾರ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪವನ್ನು
ಬೆಳಗಿಸುವ ಮೂಲಕ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ
ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐಇಇಇ ಮಂಗಳೂರು
ಉಪವಿಭಾಗದ ಅಧ್ಯಕ್ಷ ಡಾ. ವೇಣುಗೋಪಾಲ ಪಿ. ಎಸ್., ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ
ಸದಸ್ಯ ಶ್ರೀ ಇಶಾನ್ ರಾವ್, ಮತ್ತು ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ
ರೆಡ್ಡಿ ಗೌರವ ಅತಿಥಿಗಳಾಗಿ ಭಾಗವಹಿಸಿದರು. ಕುಲಸಚಿವ ಡಾ. ಅನಿಲ್ ಕುಮಾರ್, ಅಭಿವೃದ್ಧಿ ವಿಭಾಗದ ಕುಲಸಚಿವ
ಡಾ. ಅಜಯ್ ಕುಮಾರ್, ಕಾಲೇಜಿನ ಪ್ರಾಂಶುಪಾಲರು ಹಾಗೂ ಅಂತರರಾಷ್ಟ್ರೀಯ ಸಮ್ಮೇಳನದ ಪ್ರಧಾನ ಮೇಲ್ವಿಚಾರಕ
ಡಾ. ರಾಮಕೃಷ್ಣ ಎನ್ ಹೆಗಡೆ, ಸಂಚಾಲಕರಾದ ಪ್ರೊ. ಗೌರವ್ ಪ್ರಸಾದ್ ಮತ್ತು ಶ್ರೀನಿವಾಸ್ ವಿಶ್ವವಿದ್ಯಾಲಯದ
ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾದ "ಪದ್ಮಶ್ರೀ"
ಡಾ. ಎ. ಎಸ್. ಕಿರಣ್ ಕುಮಾರ್ ಮಾತನಾಡಿ, ಜಗತ್ತು ಅತ್ಯಂತ ವೇಗವಾಗಿ ರೂಪಾಂತರಗೊಳ್ಳುತ್ತಿದೆ, ವಿಜ್ಞಾನ
ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ಅದೇ ವೇಗದಲ್ಲಿ ಅಭಿವೃದ್ಧಿ ನಡೆಯುತ್ತಿದೆ ಎಂದು ವಿವರಿಸಿದರು.
ಮಾನವಕುಲ ತನ್ನ ಅಸ್ತಿತ್ವಕ್ಕಾಗಿ ಹೆಚ್ಚಿನ ಸಾಧನಗಳನ್ನು ಬಳಸಿಕೊಳ್ಳುತ್ತಿದ್ದು, ವ್ಯತ್ಯಯಕಾರಿ ತಂತ್ರಜ್ಞಾನಗಳು
ಅಭಿವೃದ್ಧಿಯ ಮೇಲೆ ಮಹತ್ತರ ಪರಿಣಾಮ ಬೀರುತ್ತಿವೆ ಎಂದರು. ಅಂತರಿಕ್ಷ ತಂತ್ರಜ್ಞಾನ ಕ್ಷೇತ್ರದಲ್ಲಿ
ಭಾರತದ ಕೊಡುಗೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಡಾ. ವಿಕ್ರಂ ಸಾರಾಭಾಯ್ ಮತ್ತು ಡಾ. ಹೋಮಿ ಭಾಭಾ
ರವರ ಸಾಧನೆಗಳನ್ನು ಸ್ಮರಿಸಿದರು. ರಾಕೆಟ್‌ಗಳು ಮತ್ತು ಉಪಗ್ರಹಗಳನ್ನು ನಿರ್ಮಿಸುವ ಸಾಮರ್ಥ್ಯ ಹೊಂದಿರುವ
ವಿಶ್ವದ ಕೆಲವೇ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಭಾರತವು
ಈಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದು, 2047ರ ವೇಳೆಗೆ “ವಿಕಸಿತ ಭಾರತ” ಗುರಿಯನ್ನು ಸಾಧಿಸುವತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು.
ಅಧ್ಯಕ್ಷೀಯ ಮಾತನಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ
ಗೌರವಾನ್ವಿತ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಐಇಇಇ ಸಮ್ಮೇಳನದ ಆಯೋಜಕರನ್ನು ಅಭಿನಂದಿಸಿದರು.
ಇಂದಿನ ಯುಗದಲ್ಲಿ ಬದಲಾವಣೆ ಅನಿವಾರ್ಯವಾಗಿದ್ದು, ಹೊಸತನ ಮತ್ತು ಜ್ಞಾನವನ್ನು ಪರಿವರ್ತಿಸುವ ಮೂಲಕ
ಮಾತ್ರ ಮಾನವ ಜೀವನವನ್ನು ಇನ್ನಷ್ಟು ಸುಧಾರಿತಗೊಳಿಸಬಹುದು ಎಂದು ಅವರು ಹೇಳಿದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಅಂತರರಾಷ್ಟ್ರೀಯ
ಸಮ್ಮೇಳನದಲ್ಲಿ ಕಂಪ್ಯೂಟರ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್, ಮೆಕ್ಯಾನಿಕಲ್
ಇಂಜಿನಿಯರಿಂಗ್, ರೋಬೋಟಿಕ್ಸ್ ಹಾಗೂ ಮೂಲಭೂತ ವಿಜ್ಞಾನ ಸೇರಿದಂತೆ ಬಹುಶಾಖೀಯ ವಿಷಯವಲಯಗಳಿಗೆ ಸಂಬಂಧಿಸಿದ
152 ಪ್ರಬಂಧಗಳನ್ನು ದೇಶದ ವಿವಿಧ ಭಾಗಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿರುವ
ಉಪನ್ಯಾಸಕರು, ಸಂಶೋಧಕರು, ತಜ್ಞರು ಹಾಗೂ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಈ ಸಂದರ್ಭದಲ್ಲಿ,
ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು, ಅಂತರರಾಷ್ಟ್ರೀಯ ಸಮ್ಮೇಳನದ ಕಾರ್ಯವಿವರ ಸಂಕಲನ (Conference Proceedings) ಪುಸ್ತಕವನ್ನು ಬಿಡುಗಡೆಗೊಳಿಸದರು.
ಡಾ. ರಾಮಕೃಷ್ಣ ಎನ್ ಹೆಗಡೆ ಸ್ವಾಗತಿಸಿ,
ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ. ಎಂ. ವಂದಿಸಿದರು.
ಪ್ರೊ. ರೋಹನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ, ಅನಘಾ ಪ್ರಾರ್ಥಿಸಿದರು. ಕಾಲೇಜಿನ ವಿವಿಧ ವಿಭಾಗಗಳ
ಮುಖ್ಯಸ್ಥರು, ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ
ಹಾಗೂ ಕೈಗಾರಿಕಾ ಕ್ಷೇತ್ರಗಳಿಂದ ಆಗಮಿಸಿದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


