ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿ: ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, 2026ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮ ಸಂಯೋಜನಾಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಉದ್ಘಾಟಿಸಿ ಶುಭಹಾರೈಸಿದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷತೆ ವಹಿಸಿದ್ದರು. 


ಡಾ. ಇಕ್ಬಾಲ್, ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್,  ಸತ್ಯನಾರಾಯಣ ಭಟ್ ಎಡಂಬಳೆ, ಪ್ರಗತಿಪರ ಕೃಷಿಕರು, ಮೊಂಟೆಪದವು, ಪ್ರಮೀಳಾ ಕೆ. ಬಿ., ಮುಖ್ಯೋಪಾಧ್ಯಾಯರು ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವು, ಜ। ಮಹಮ್ಮದ್‌ ಹನೀಫ್ ಚಂದಹಿತ್ಲು, ಅಧ್ಯಕ್ಷರು, ಶಾಲಾ ಅಭಿವೃದ್ಧಿ ಸಮಿತಿ, ಪ್ರಾಥಮಿಕ ವಿಭಾಗ, ಕೆ.ಪಿ.ಎಸ್. ಮೊಂಟೆಪದವು,  ಶೈಲಜಾ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು, ಗ್ರಾಮ ಪಂಚಾಯತ್ ನರಿಂಗಾನ, ನಳಿನಿ , ಕಾರ್ಯದರ್ಶಿ, ಗ್ರಾಮ ಪಂಚಾಯತ್ ನರಿಂಗಾನ, ಜ। ಅಬ್ದುಲ್ ರಹಿಮಾನ್, ನಿಕಟಪೂರ್ವ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ನರಿಂಗಾನ, ಮುರಳೀಧರ ಶೆಟ್ಟಿ, ಮೋರ್ಲ, ಅಧ್ಯಕ್ಷರು, ಯುವಕ ಮಂಡಲ (ರಿ), ನರಿಂಗಾನ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 


ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಕುಮಾರಿ ಚೈತ್ರ ಎನ್ ವಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಮುಹಮ್ಮದ್ ಆಶಿಕ್ ಮತ್ತು ತಂಡದವರು ಎನ್ ಎಸ್ ಎಸ್ ಗೀತೆಯನ್ನು ನಡೆಸಿಕೊಟ್ಟರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಗುರುರಾಜ್ ಪಿ ಸ್ವಾಗತಿಸಿದರೆ,  ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಕುಮಾರಿ ಖೈರುನ್ನೀಸ ವಂದಿಸಿದರು. ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಮುನೀರ ಎ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top