ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ಕಡಬ ತಾಲೂಕಿನ ಕುಮಾರಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಶಿಬಿರಾರ್ಥಿಗಳು ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸಿ ಪರಿಸರವನ್ನು ಶುದ್ಧಗೊಳಿಸಿದರು.
ಸಮಾರೋಪ ಸಮಾರಂಭದಲ್ಲಿ ಕುಮಾರಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹೇಮಲತಾ ಅಧ್ಯಕ್ಷತೆ ವಹಿಸಿ, ಶಿಬಿರಾರ್ಥಿಗಳು ಕೈಗೊಂಡ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಎನ್.ಟಿ. ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಸವಣೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ್ ವೈ., ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಕೆ. ಉಪಸ್ಥಿತರಿದ್ದರು.
ಫಿಲೋಮಿನಾ ಕಾಲೇಜು
ರಾ.ಸೇ.ಯೋ. ಸಂಯೋಜನಾಧಿಕಾರಿ
ಡಾ. ಕೆ. ಚಂದ್ರಶೇಖರ್ ಮತ್ತು
ಪುಷ್ಪಾ ಎನ್. ಉಪಸ್ಥಿತರಿದ್ದರು. ಎನ್.ಎಸ್.ಎಸ್
ಕಾರ್ಯದರ್ಶಿ ವಿಷ್ಣುಜೀತ್ ನಿರೂಪಿಸಿದರು. ಚರಣ್ ಸ್ವಾಗತಿಸಿ, ಘಟಕ
ನಾಯಕಿ ಲವಿಕ ವಂದಿಸಿದರು. ಆಕಾಶ್,
ಅರ್ಚನಾ, ಕೆವಿನ್, ಘಟಕ ನಾಯಕರಾದ ಮನೀಶ್
ಮತ್ತು ಮನ್ವಿತ್ ಸಹಕರಿಸಿದರು. ಸಮಾರೋಪದ ನಂತರ ಎನ್.ಎಸ್.ಎಸ್
ಹಾಗೂ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



