ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪಿಸುವಲ್ಲಿ ಎನ್‌ಎಎಸ್‌ಎಸ್‌ ಪಾತ್ರ ದೊಡ್ಡದು: ಮಂಗಳ ಪಿ. ರೈ

Upayuktha
0


ಮಂಗಳೂರು: ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪಿಸಲು ರಾಷ್ಟೀಯ ಸೇವಾ ಯೋಜನೆ ಬಹಳ ಮುಖ್ಯ ಪಾತ್ರವಹಿಸುತ್ತದೆ. ಅಲ್ಲದೇ, ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರಿಗೆ ಸಮಾಜ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸುತ್ತದೆ ಎಂದು ಸೋಮೇಶ್ವರದ ಪರಿಜ್ಞಾನ ವಿದ್ಯಾಲಯದ ಸಹ ಶಿಕ್ಷಕಿ ಮಂಗಳ ಪಿ. ರೈ ಹೇಳಿದರು.


ನಗರದ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ೨೦೨೫-೨೬ನೇ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಜ್ಞಾಪೂರ್ವಕ ಸಮಾಜ ನಿರ್ಮಾಣದಲ್ಲಿ ಸ್ವಯಂ ಸೇವೆಯ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದರು. 


ವಿದ್ಯಾರ್ಥಿದೆಸೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಲಿತ ಪಾಠ ಭವಿಷ್ಯದಲ್ಲೂ ಸಹಕರಿಯಾಗುವುದರ ಜೊತೆಗೆ ಪರೋಪಕಾರಿ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸಮಾಜಮುಖಿಯಾದ ಯಾವುದೇ ಕಾರ್ಯವನ್ನು ಕೈಗೆತ್ತಿಕೊಂಡರೆ ಅದನ್ನು ಪೂರೈಸದೇ ಬಿಡುವುದಿಲ್ಲ. ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.


ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರವನ್ನು ಸೋಮೇಶ್ವರ ಪುರಸಭೆ ಅಧ್ಯಕ್ಷೆ ಕಮಲ ಉದ್ಘಾಟಿಸಿದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ನಿಕಟಪೂರ್ವ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ಆನಂದಾಶ್ರಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗುರುಮೂರ್ತಿ ಪಿ., ಆನಂದಾಶ್ರಮ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವನ್ ಸೋಮೇಶ್ವರ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿ ಡಾ. ಸುರೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಭವ್ಯ, ಸಹ ಶಿಬಿರಾಧಿಕಾರಿಗಳಾದ ಪ್ರವಾಸೋದ್ಯಮ ವಿಭಾಗದ ಭರತ್ ಕುಮಾರ್, ಉಪನ್ಯಾಸಕಿ ಲಿಖಿತ, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ನಿಧಿಶ್ರೀ ಮತ್ತು ಉಪನ್ಯಾಸಕಿ ಪೂಜಾರಿ ಜಯಶ್ರೀ ಉಪಸ್ಥಿತರಿದ್ದರು.


Post a Comment

0 Comments
Post a Comment (0)
To Top