ಕುರ್ನಾಡು ಗ್ರಾಮದ ನೂತನ ಪಶು ಚಿಕಿತ್ಸಾಲಯ ಕಟ್ಟಡ ನಾಳೆ ಉದ್ಘಾಟನೆ

Upayuktha
0



ಮಂಗಳೂರು: ಉಳ್ಳಾಲ ತಾಲೂಕು ವ್ಯಾಪ್ತಿಯ ಕುರ್ನಾಡು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಉದ್ಘಾಟನಾ ಸಮಾರಂಭವು ಏಪ್ರಿಲ್ 24, 2026ರಂದು ಪೂರ್ವಾಹ್ನ 09:00 ಗಂಟೆಗೆ ನಡೆಯಲಿದೆ.


ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಆರ್.ಐ.ಡಿ.ಎಫ್-28 ಯೋಜನೆಯಡಿ ಈ ಕಟ್ಟಡವನ್ನು ನಿರ್ಮಿಸಲಾಗಿದ್ದು, ಇದು ಸ್ಥಳೀಯ ರೈತರು ಹಾಗೂ ಪಶುಪಾಲಕರಿಗೆ ಆಧುನಿಕ ಮತ್ತು ಸುಧಾರಿತ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುವ ಮಹತ್ವದ ಕೇಂದ್ರವಾಗಲಿದೆ.


ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಇದರೊಂದಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣದ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣ ರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.


ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಐವನ್ ಡಿ’ಸೋಜ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ ಹಾಗೂ ಕಿಶೋರ್ ಬಿ.ಆರ್. ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಥಾನ್ಸಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿರಲಿದ್ದಾರೆ.


ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ, ಉಳ್ಳಾಲ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್. ರಫೀಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಹಾಗೂ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ ಕುಮಾರ್ ಶೆಟ್ಟಿ ಎನ್. ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.


ಈ ನೂತನ ಪಶು ಚಿಕಿತ್ಸಾಲಯ ಕಟ್ಟಡವು ಗ್ರಾಮೀಣ ಭಾಗದಲ್ಲಿ ಪಶುಪಾಲನಾ ಸೇವೆಗಳನ್ನು ಬಲಪಡಿಸುವುದರೊಂದಿಗೆ, ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top