ನಿತ್ಯಶ್ರೀ ಬಿ.ವಿ.ಗೆ ಪಿಎಚ್ ಡಿ ಪದವಿ

Upayuktha
0


ಮಂಗಳೂರು: ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ. ಇವರು ಮಂಗಳೂರಿನ ಆಯ್ದ ಶಾಲೆಗಳ ಹದಿಹರೆಯದ ಬಾಲಕಿಯರಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ಉದ್ದೇಶದಿಂದ ಅರಿವು, ದೃಢವಾದ ನಡವಳಿಕೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುವ ಸಾಮರ್ಥ್ಯ ವರ್ಧನಾ ಕಾರ್ಯಕ್ರಮದ ಪರಿಣಾಮಕಾರಿತ್ವದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಯೆನೆಪೋಯ ಪರಿಗಣಿತ ವಿ.ವಿ. ಪಿಎಚ್ ಡಿ ಪದವಿ ನೀಡಿದೆ.


ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರೈಸಿದ್ದರು. ಯೆನೆಪೋಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಯಾಗಿರುವ ನಿತ್ಯಶ್ರೀ ಬಿ.ವಿ. ಇವರು ಸುಳ್ಯದ ನಿವೃತ್ತ ಸರ್ವೆ ಮೇಲ್ವಿಚಾರಕ ವಿಠಲ ಬಿ.ಕೆ.- ರುಕ್ಮಿಣಿ ಬಿ.ವಿ. ದಂಪತಿ ಪುತ್ರಿ. ಗಣೇಶ್ ಮಾಣಿಬೆಟ್ಟು ಅವರ ಪತ್ನಿ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top