ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Upayuktha
0



ಉಜಿರೆ: "ಸಿನಿಮಾ ಹಾಗೂ ಡಿಜಿಟಲ್ ಕ್ಷೇತ್ರ ಎಲ್ಲರಿಗೂ ಒಂದು ಕ್ರಿಯೇಟಿವ್ ಸ್ವಾತಂತ್ರ್ಯ ನೀಡುತ್ತದೆ. ಆದರೆ ಆ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಗಳೂ ಇರುತ್ತವೆ. ಸಿಕ್ಕ ಸ್ವಾತಂತ್ರ್ಯವನ್ನು ಸಮಾಜಕ್ಕೆ ಪೂರಕವಾಗಿ ಬಳಸಬೇಕಾಗಿರುವುದೇ ನಮ್ಮ ಜವಾಬ್ದಾರಿ ಆಗಿದೆ" ಎಂದು ಎಸ್ಡಿಎಂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಸ್ ಹೇಳಿದರು. 


ಎಸ್‌ಡಿಎಂ ಕಾಲೇಜಿನ ಬಿ. ವೋಕ್. ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ಹಾಗೂ ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, "ಸಿನಿಮಾ ಕ್ಷೇತ್ರ ಇಂದು ವ್ಯಾಪಾರೀಕರಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಆದರೆ ನಾವು ಜವಾಬ್ದಾರಿಯುತ ಕ್ರಿಯೇಟರ್‌ಗಳಾಗಿ ಸಮಾಜಕ್ಕೆ ಉಪಯೋಗ ಆಗುವಂತಹ ಕಂಟೆಂಟ್ ಕೊಡುವವರಾಗಬೇಕು" ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅಂಕಿತಾ ಹಾಗೂ ವಿದ್ಯಾರ್ಥಿ ಅಚ್ಯುತ್, ಕ್ರಮವಾಗಿ ಲೂಮೋಸ್ ಸಂಘ ಹಾಗೂ ಟೆಸರಾಕ್ಟ್ ಸೊಸೈಟಿಯ ವಾರ್ಷಿಕ ವರದಿಯನ್ನು ವಾಚಿಸಿದರು. 


ಈ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಜೈನ್, ಇಂದುಧರ್ ಕಿಣಿ ಹಾಗೂ ತೇಜಸ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top