ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡಕ್ಕೆ ಹೆಮ್ಮೆ ತಂದ ಆಳ್ವಾಸ್ ಕಾಲೇಜಿನ ದಿಶಾ

Upayuktha
0


ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.


ಮೂಡಬಿದ್ರೆ ನಿವಾಸಿಯೂ ಆಗಿರುವ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದುಕೊಂಡು ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇನ್ನು, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊAಡಿದ್ದಾರೆ.


ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕ ಪಡೆದು ಸಾಧನೆ ಮಾಡಿದ್ದಾರೆ.


ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು, 2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.


ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top