ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಪೋಷಕರ ಸಭೆ

Upayuktha
0

 


 

ಉಡುಪಿ: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ ಕಾಲೇಜಿನ ಟಿ.ಎಂ.. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಪೋಷಕರ ಸಭೆ ನಡೆಯಿತು.

ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ತಿಂಗಳ 30ರಂದು ನಿವೃತ್ತಿಗೊಳ್ಳಲಿರುವ ಅವರನ್ನು ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೋಷಕ-ಶಿಕ್ಷಕ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಪರೀಕ್ಷಾ ಸಿದ್ಧತೆ ಹಾಗೂ ಪೋಷಕರ ಸಹಕಾರದ ಮಹತ್ವ ಕುರಿತು ಚರ್ಚಿಸಲಾಯಿತು. ಕಾಲೇಜಿನ ಅಭಿವೃದ್ಧಿಗೆ ಪೋಷಕರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.

 

ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಖಜಾಂಚಿ ನರೇಂದ್ರ ರಾವ್, ನಿರ್ದೆಶಕರಾದ ಭಾರತಿ ಜಯಕರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಕೆ. ರೂಪಾ ನಾಯಕ್, ಶ್ರೀಮತಿ ಸುನೀತಾ ಪೂಜಾರಿ, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಸನತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿ.ಸಿ. ವಿದ್ಯಾರ್ಥಿನಿ ನಮೃತ ಪ್ರಾರ್ಥಿಸಿ, ಪೋಷಕ-ಶಿಕ್ಷಕರ ಸಂಘದ ಕಾರ್ಯದರ್ಶಿ ಭಾರತಿ ಜಯಕರ್  ವಂದಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top