ಸತತ 4ನೇ ವರ್ಷವೂ 100ಕ್ಕೆ 100 ಫಲಿತಾಂಶ ದಾಖಲಿಸಿದ ಮೂರೂರಿನ ಪ್ರಗತಿ ಪಿಯು ಕಾಲೇಜು

Upayuktha
0


ಕುಮಟಾ: ಪರಮಪೂಜ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಆಶೀರ್ವಾದದೊಂದಿಗೆ ಮುನ್ನಡೆಯುತ್ತಿರುವ ಮೂರೂರಿನ ಪ್ರಗತಿ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶೇಕಡಾ 100 ರಷ್ಟು ಫಲಿತಾಂಶ ದಾಖಲಾಗಿದ್ದು, ಇದು ಸತತ ನಾಲ್ಕನೇ ವರ್ಷದ ಸಾಧನೆಯಾಗಿದೆ. ಉತ್ತಮ ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟಕ್ಕೆ ಇದು ನಿದರ್ಶನವಾಗಿದೆ.


ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕುಮಾರಿ ಸೌಜನ್ಯ ಹೆಗಡೆ 94.5%, ಕುಮಾರಿ ಪೃಥ್ವಿ ಹೆಗಡೆ 92.6%, ಹಾಗೂ ಕುಮಾರ್ ಸಮರ್ಥ ರೇವಣಕರ್ 90.5% ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಕುಮಾರಿ ಮನಸ್ವಿನಿ ಭಟ್ಟ 92.6% ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ಶಿಕ್ಷಣದ ಜೊತೆಗೆ ಪ್ರಗತಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ಇದರೊಂದಿಗೆ ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಭಾರತಿ ಕಲಾಕೇಂದ್ರ'ದಲ್ಲಿ ಯಕ್ಷಗಾನ, ಸಂಗೀತ, ತಬಲಾ, ಕರಾಟೆ, ಭರತನಾಟ್ಯ ಮುಂತಾದ ಕಲಾ ಪ್ರಕಾರಗಳನ್ನೂ ಕಲಿಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಅತ್ಯುತ್ತಮ ಅಂಕ ಗಳಿಸಿ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯಾಧ್ಯಕ್ಷರು, ಪಧಿಕಾರಿಗಳು, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಆತ್ಮೀಯವಾಗಿ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top