ಸೇನಾ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

Upayuktha
0

 


ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 13 ರ ವರೆಗೆ ವಿಸ್ತರಿಸಲಾಗಿದೆ.

ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ರ‍್ಯಾಲಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top