ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Upayuktha
0


ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತವಾಗಿ ಪಿ.ಯು.ಸಿ (ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ) ಶಿಕ್ಷಣದೊಂದಿಗೆ ನೀಟ್, ಜೆ.. ಮತ್ತು ಸಿ..ಟಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು, ರಾಜ್ಯದ ಖಾಯಂ ನಿವಾಸಿಯಾಗಿರುವ, ಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಅಥವಾ 3ಬಿ ಜಾತಿಗೆ ಸೇರಿರುವ, ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ 8 ಲಕ್ಷ ರೂ. ಒಳಗಿರುವ ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಾಂಗವನ್ನು ಸರ್ಕಾರಿ ವಸತಿ ರಹಿತ ಶಾಲೆಯಲ್ಲಿ ಪೂರೈಸುವುದರೊಂದಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 90 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೆ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top