ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿ ಏ.೭ರಂದು ಬೆಳಗ್ಗೆ 11ಕ್ಕೆ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ನಡೆಯಲಿದೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕೆಎಂಸಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗಶಾಸ್ತ್ರ ತಜ್ಞೆ ಡಾ. ಶ್ರದ್ಧಾ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ ಬಿ, ಮಂಗಳೂರು ವಿ.ವಿ. ನೋಡಲ್ ಅಧಿಕಾರಿ ಡಾ. ಗಾಯತ್ರಿ. ಎನ್, ನಿಟ್ಟೆ ಪರಿಗಣಿತ ವಿ.ವಿ. ನೋಡಲ್ ಅಧಿಕಾರಿ ಡಾ. ಶಂತನು ಸಹ ಉಪಸ್ಥಿತರಿರುವರು ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


