ರಾಜ್ಯಮಟ್ಟದ ಅಂತರ್‌ಕಾಲೇಜು ಸಾಂಸ್ಕೃತಿಕ ಉತ್ಸವ: ವಿಸಿಇಟಿ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Upayuktha
0


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್‌ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.


ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಆಚಾರ್ಯ ಹಬ್ಬ-2026 ಸ್ಪರ್ಧೆಯಲ್ಲಿ ಕಾಲೇಜಿನ ಭೂಮಿಕಾ ಕಲಾ ಸಂಘದ ವಿದ್ಯಾರ್ಥಿಗಳ ತಂಡವು ತನ್ನ ಅಪೂರ್ವ ಪ್ರತಿಭೆಯನ್ನು ಪ್ರದರ್ಶಿಸಿ ವಿಶೇಷ ಸಾಧನೆಯನ್ನು ಮಾಡಿದೆ.


ರಾಜ್ಯಾದ್ಯಂತ 100ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಕಲಾ ತಂಡಗಳ 2500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ 25 ವಿದ್ಯಾರ್ಥಿಗಳು 18 ಬಗೆಯ ವೈವಿದ್ಯಮಯ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದು ವಿಶೇಷ ಪ್ರದರ್ಶನದೊಂದಿಗೆ ತೀವ್ರ ಪೈಪೋಟಿಯನ್ನು ನೀಡಿದ್ದಾರೆ.


ಕಾಲೇಜಿನ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಮನ್ನಿತ್ ಎನ್ ಗೌಡ ಇವರು ಸ್ಪಾಟ್ ಪೈಂಟಿಂಗ್‍ನಲ್ಲಿ ಚಿನ್ನದ ಪದಕ ಹಾಗೂ ವ್ಯಂಗ್ಯಚಿತ್ರ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ತಾಳ ವಾದ್ಯ ಸ್ಪರ್ಧೆಯಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ತನ್ಮಯಿ ಯು ಇವರು ಬೆಳ್ಳಿಯ ಪದಕ ಹಾಗೂ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿಭಾಶ್ರೀ ವಿ ಗೌಡ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.


ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಸಹನಿರ್ದೇಶಕಿ ಡಾ.ಶ್ವೇತಾಂಬಿಕಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top