ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಆಯೋಜಿಸಲಾದ ‘ಆಂತರ್ಯ 2.0’ ರಾಷ್ಟ್ರೀಯ ಮಟ್ಟದ ಕಾಲೇಜು ಐಟಿ ಉತ್ಸವದಲ್ಲಿ ಅಕ್ಷಯ ಕಾಲೇಜು, ಪುತ್ತೂರು ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.
ಗುರುವಾರ ನಡೆದ ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ವಿಶೇಷವಾಗಿ ನೃತ್ಯ ಸ್ಪರ್ಧೆಯಲ್ಲಿ ದೇವಿಕಾ, ಮೋಕ್ಷ ಪಕಳಕುಂಜ, ದೀಕ್ಷಾ, ಸ್ವರ್ಣಶ್ರೀ, ತ್ರಿಷಾ, ದೀಕ್ಷಾ ಇವರ ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರು.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಈ ರೀತಿಯ ಉತ್ಸವಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರೊಂದಿಗೆ, ಅವರ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


