ಉಜಿರೆ ಎಸ್.ಡಿ.ಎಂ. ಕಾಲೇಜು: ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ 'ವೆಂಚುರ- 2026'

Upayuktha
0

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು: ದಿಯಾ ಅಜಯ್

ಉಜಿರೆ: ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಂಡು, ಭಯ, ಹಿಂಜರಿಕೆಯಿಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಕಸ್ಟಮರ್ ಎಕ್ಸ್ಪೀರಿಯೆನ್ಸ್ (ಸ್ಟೇಟ್ ಆಪರೇಷನ್ಸ್-ಕರ್ನಾಟಕ, ಕೇರಳ) ಮುಖ್ಯಸ್ಥೆ ದಿಯಾ ಅಜಯ್ ಹೇಳಿದರು. 


ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು ಉದ್ಯಮ ಆಡಳಿತ ವಿಭಾಗದ ಆಶ್ರಯದಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ವತಿಯಿಂದ (ಎ.4) ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ 'ವೆಂಚುರ- 2026' ಉದ್ಘಾಟಿಸಿ ಅವರು ಮಾತನಾಡಿದರು. 


“ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವುದರಿಂದ ಸೃಜನಶೀಲತೆ ಮತ್ತು ಕ್ರಿಯಾತ್ಮಕತೆ ಬೆಳೆಯುತ್ತದೆ. ಜೊತೆಗೆ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ನೀಡುತ್ತವೆ. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಹಜ. ಸೋಲಿನ ಭೀತಿಯಿಲ್ಲದೆ ವಿದ್ಯಾರ್ಥಿಗಳು ಈ ರೀತಿಯ ಫೆಸ್ಟ್ ಗಳಲ್ಲಿ ಭಾಗವಹಿಸುವುದರ ಮೂಲಕ ವೃತ್ತಿಪರತೆಯ ಅನುಭವ ಪಡೆದುಕೊಳ್ಳಬೇಕು. ಇದು ತಮ್ಮ ವೃತ್ತಿ ಬದುಕಿನಲ್ಲಿ ನೆರವಾಗುತ್ತದೆ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು” ಎಂದು ಅವರು ಹೇಳಿದರು.


ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮಾತನಾಡಿ, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ತುಂಬಾ ಮುಖ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಕೌಶಲಗಳನ್ನು ಹಾಗೂ ಪ್ರಾಯೋಗಿಕ ಅನುಭವವನ್ನು ಪಡೆದುಕೊಂಡಾಗ ಮಾತ್ರ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದರು.


“ಭಿನ್ನ ಆಲೋಚನೆ, ಸೃಜನಶೀಲತೆಯನ್ನು ರೂಢಿಸಿಕೊಳ್ಳಬೇಕು. ಹಾಗಾಗಿ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಪೂರಕವಾದ ಚಟುವಟಿಕೆಗಳನ್ನು ನಮ್ಮ ಕಾಲೇಜು ನಿರಂತರವಾಗಿ ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಈ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು" ಎಂದರು. 


ಕಾರ್ಯಕ್ರಮ ಸಂಯೋಜಕರಾದ ವಾಣಿಜ್ಯ ವಿಭಾಗದ ಅಧ್ಯಾಪಕಿ ಫಾತಿಮಾ ಸಫೀರಾ, ಉದ್ಯಮ ಆಡಳಿತ ವಿಭಾಗದ ಅಧ್ಯಾಪಕ ಗುರುರಾಜ್, ವಿದ್ಯಾರ್ಥಿ ಪ್ರತಿನಿಧಿಗಳು, ಕಾಲೇಜಿನ ವಿವಿಧ  ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಸ್ವಾಗತಿಸಿ, ವಿದ್ಯಾರ್ಥಿ ಪ್ರತಿನಿಧಿ ಸ್ಪಂದನಾ ವಂದಿಸಿ, ಧರಿತ್ರಿ ಭಿಡೆ ನಿರೂಪಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top