ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯದ 44ನೇ ಘಟಿಕೋತ್ಸವದಲ್ಲಿ ದೈವ ಆರಾಧನೆ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆಯವರಾದ ಡಾ. ರವೀಶ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿಯೂ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.
ಡಾ. ರವೀಶ್ ಪಡುಮಲೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೈವ ನೃತ್ಯಕರಾಗಿದ್ದು, ಚಿಂತಕರು, ವಾಗ್ಮಿ ಮತ್ತು ಲೇಖಕರಾಗಿದ್ದಾರೆ. ಉಜಿರೆಯ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿರುವ ಅವರು ದೈವ ನೃತ್ಯದ ಸಂಪ್ರದಾಯವನ್ನು ಪಾಲಿಸುತ್ತಾ ಹಿಂದೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಇವರ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಡಾ. ಡಿ. ಹರ್ಷೇಂದ್ರ ಕುಮಾರ್ ಹಾಗೂ ಡಾ. ಸತೀಶ್ಚಂದ್ರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಡಾ. ರವೀಶ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


