ಉಜಿರೆಯಲ್ಲಿ ‘ಎಸ್.ಡಿ.ಎಂ ಉದ್ಯೋಗಂ–2026’: ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಸಜ್ಜು

Upayuktha
0


ಉಜಿರೆ: ಉಜಿರೆಯಲ್ಲಿ ಏಪ್ರಿಲ್ 6 ಮತ್ತು 7ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ (ರಿ) ಆಶ್ರಯದಲ್ಲಿ ‘ಎಸ್.ಡಿ.ಎಂ ಉದ್ಯೋಗಂ–2026’ ಎಂಬ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, 100ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲು ಸಿದ್ಧವಾಗಿವೆ. ಉಜಿರೆಯ ಎಸ್.ಡಿ.ಎಂ ಕಾಲೇಜು (ಸ್ವಾಯತ್ತ), ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜುಗಳ ಸಹಯೋಗದಲ್ಲಿ ಈ ಮೇಳ ಆಯೋಜಿಸಲಾಗಿದೆ.


ಒಟ್ಟು 4000ಕ್ಕೂ ಅಧಿಕ ಖಾಲಿ ಹುದ್ದೆಗಳ ಭರ್ತಿಗಾಗಿ ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಲಿವೆ. ಉದ್ಯೋಗ ಮೇಳವು ಎಸ್.ಡಿ.ಎಂ ಕಾಲೇಜಿನಲ್ಲಿ ಬೆಳಗ್ಗೆ 9.30ರಿಂದ ಆರಂಭವಾಗಲಿದೆ. ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ನೋಂದಣಿ ಅವಕಾಶ ಕಲ್ಪಿಸಲಾಗಿದೆ.


ಐಟಿ ಮತ್ತು ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಫಾರ್ಮಾಸ್ಯೂಟಿಕಲ್ಸ್, ಬ್ಯಾಂಕಿಂಗ್ ಮತ್ತು ಫೈನಾನ್ಸ್, ಐಟಿ ಮತ್ತು ಐಟಿಇಎಸ್, ಸೇಲ್ಸ್ ಮತ್ತು ಮಾರ್ಕೆಟಿಂಗ್, ರೀಟೈಲ್, ಶಿಕ್ಷಣ, ಪ್ರವಾಸೋದ್ಯಮ ಮತ್ತು ಆತಿಥ್ಯ, ಅಕೌಂಟಿಂಗ್ ಮತ್ತು ಟ್ಯಾಕ್ಸ್ ಕನ್ಸಲ್ಟೆನ್ಸಿ, ಉತ್ಪಾದನೆ, ಆಟೋಮೊಬೈಲ್, ಟೆಲಿಕಾಂ, ಮೀಡಿಯಾ, ನಿರ್ಮಾಣ ಹಾಗೂ ಇನ್‌ಫ್ರಾಸ್ಟ್ರಕ್ಚರ್ ಸೇರಿದಂತೆ ಹಲವು ಕ್ಷೇತ್ರಗಳ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ಅಭ್ಯರ್ಥಿಗಳಿಗೆ ವ್ಯಾಪಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ.


ಪಿ.ಯು.ಸಿ.ದಿಂದ ಹಿಡಿದು ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು- ಬಿ.ಎ., ಬಿ.ಬಿ.ಎ., ಬಿ.ಕಾಂ., ಬಿ.ಸಿ.ಎ., ಬಿ.ಎಸ್ಸಿ., ಬಿ.ವೋಕ್., ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಬಿ.ಟೆಕ್., ಬಿ.ಎಡ್., ಎಂ.ಎ., ಎಂ.ಸಿ.ಜೆ., ಎಂ.ಎಸ್.ಡಬ್ಲ್ಯು., ಎಂ.ಕಾಂ., ಎಂ.ಸಿ.ಎ., ಎಂ.ಎಸ್ಸಿ., ಎಂ.ಬಿ.ಎ., ಜಿ.ಎನ್.ಎಂ ನರ್ಸಿಂಗ್ ಸೇರಿದಂತೆ ವಿವಿಧ ಅರ್ಹತೆಗಳವರು ಭಾಗವಹಿಸಬಹುದು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ.


ಈಗಾಗಲೇ ಗೂಗಲ್ ಫಾರ್ಮ್ ಮೂಲಕ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, 2000ಕ್ಕೂ ಅಧಿಕ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಮೇಳದ ಸಂಪೂರ್ಣ ಪ್ರಕ್ರಿಯೆಯನ್ನು ಪೇಪರ್‌ರಹಿತವಾಗಿ ರೂಪಿಸಲಾಗಿದ್ದು, ವಿಶೇಷ ಸಾಫ್ಟ್‌ವೇರ್ ಮೂಲಕ ಸಂದರ್ಶನ ಫಲಿತಾಂಶವನ್ನು ಅಭ್ಯರ್ಥಿಗಳು ತಮ್ಮ ಮೊಬೈಲ್‌ನಲ್ಲೇ ತಿಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.


ತಾಲೂಕಿನ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ಪ್ರಥಮ ಬಾರಿಗೆ ಆಯೋಜಿಸುತ್ತಿರುವ ಈ ಎರಡು ದಿನಗಳ ಬೃಹತ್ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಮನವಿ ಮಾಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top