ಉಜಿರೆ: ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ಕಲಾವೈಭವ ತಂಡವು ಈ ವರ್ಷ ರಾಜ್ಯದ ವಿವಿಧ ಭಾಗಗಳಲ್ಲಿ 20 ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸಲು ಮತ್ತು ಪ್ರೋತ್ಸಾಹಿಸಲು, ಈ ವರ್ಷದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ, 2025-26ನೇ ಸಾಲಿನ ನೃತ್ಯ, ಯಕ್ಷಗಾನ ಹಾಗೂ ರಂಗ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಸುಮಾರು ರೂ. 4.5 ಲಕ್ಷ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸೋನಿಯಾ ಯಶೋವರ್ಮ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ, ಕಲಾ ಕೇಂದ್ರದ ಸಂಯೋಜಕರಾದ ತೃಪ್ತ ಕುಮಾರ್ ಜೈನ್, ಡಾ. ನಾಗಣ್ಣ ಡಿ.ಎ ಹಾಗೂ ತರಬೇತುದಾರರು ಉಪಸ್ಥಿತರಿದ್ದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಹುಟ್ಟಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


