ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಡ ಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಹಾಜರಾದ 177 ವಿದ್ಯಾರ್ಥಿಗಳಲ್ಲಿ 166 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು 94.85% ಫಲಿತಾಂಶ ಬಂದಿರುತ್ತದೆ.
ಶಾಲೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ 14 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಇದರಲ್ಲಿ 5 ವಿದ್ಯಾರ್ಥಿಗಳು ಎ ಪ್ಲಸ್ ಗ್ರೇಡ್ ಶ್ರೇಣಿಯಲ್ಲಿ ಹಾಗೂ 28 ವಿದ್ಯಾರ್ಥಿಗಳು ಎ ಗ್ರೇಡ್ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕೀರ್ತನ ಎಸ್ ಬಂಗೇರ ಇಂಗ್ಲಿಷ್ ಮಾಧ್ಯಮದಲ್ಲಿ 625 ರಲ್ಲಿ 600 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ನಿಖಿಲ್ 588 ಅಂಕಗಳನ್ನು ಪಡೆದು ದ್ವಿತೀಯ, ಭಾಗ್ಯಶ್ರೀ 572 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನುಗಳಿಸಿರುತ್ತಾರೆ. ಕನ್ನಡ ಮಾಧ್ಯಮದಲ್ಲಿ ಅಜೇಯ್ 625ರಲ್ಲಿ 548ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ರಚಿತ್ 540 ಅಂಕಗಳನ್ನು ಪಡೆದು ದ್ವಿತೀಯ, ನೇತ್ರಾವತಿ 523 ತೃತೀಯ ಸ್ಥಾನವನ್ನುಗಳಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


